ಸಂಪುಟ ಸಂಕಷ್ಟ: ದೆಹಲಿ ನಾಯಕರತ್ತ ಬಿಎಸ್‌ವೈ ಬೊಟ್ಟು!

ಬೆಂಗಳೂರು: ಸಂಪುಟ ವಿಸ್ತರಣೆ ಬೆನ್ನಲ್ಲೇ ಭುಗಿಲೆದ್ದಿರುವ ಭಿನ್ನಮತದ ಹಿನ್ನೆಲೆಯಲ್ಲಿ ತಳಮಳಕ್ಕೊಳಗಿರುವ ಸಿಎಂ ಬಿ.ಎಸ್ ಯಡಿಯೂರಪ್ಪ ಸದ್ಯದ ಪರಿಸ್ಥಿತಿಗೆ ಪರೋಕ್ಷವಾಗಿ ಹೈಕಮಾಂಡ್‌ನತ್ತ ಬೊಟ್ಟು ಮಾಡಿದ್ದಾರೆ. ಸಂಪುಟ ವಿಸ್ತರಣೆಯ ಕುರಿತಾದ ನಿರ್ಧಾರದಲ್ಲಿ ನನ್ನ ಪಾತ್ರಕ್ಕಿಂತ ದೆಹಲಿ ನಾಯಕರ ಪಾತ್ರವೇ ಬಹುಮುಖ್ಯವಾಗಿದೆ, ತಪ್ಪು, ಸರಿ ಯಾವುದು ಎಂಬುವುದು ಅವರಿಗೆ ಗೊತ್ತು ಎನ್ನುವ ಮೂಲಕ ಪರೋಕ್ಷವಾಗಿ ದೆಹಲಿ ನಾಯಕರ ಮೇಲೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಬುಧವಾರ ನಡೆದ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಪಾಳಯದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಎಸ್‌ವೈ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರೆ ಬಿಎಸ್‌ವೈ ಆಪ್ತರು ಸಿ.ಪಿ ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಬಿಎಸ್‌ವೈ ಪಟ್ಟಿಯಲ್ಲಿ ಕೆಲವೊಂದು ಬದಲಾವಣೆ ಮಾಡಿದ ಹಿನ್ನೆಲೆಯಲ್ಲಿ ಮುನಿರತ್ನ ಅವರಿಗೆ ಸಂಪುಟದಲ್ಲಿ ಸ್ಥಾನ ಕೈತಪ್ಪಿದೆ. ಹೈಕಮಾಂಡ್ ನಾಯಕರ ಮಧ್ಯಪ್ರವೇಶದಿಂದ ಇದಾಗಿದೆ ಎಂಬುವುದು ಬಿಎಸ್‌ವೈ ಆಪ್ತರ ವಾದವಾಗಿದೆ. ಇಷ್ಟೇ ಅಲ್ಲದೆ ಸಂಪುಟದಲ್ಲಿ ಒಟ್ಟು ಐವರು ಪರಿಷತ್ ಸದಸ್ಯರಿಗೆ ಸಚಿವ ಸ್ಥಾನ ನೀಡಿರುವುದು ಕೂಡಾ ಹಲವರ ಆಕ್ರೋಶಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಆಕಾಂಕ್ಷಿಗಳ ಆಕ್ರೋಶ ತೀವ್ರಗೊಳ್ಳುತ್ತಿದೆ. ಎಂಪಿ ರೇಣುಕಾಚಾರ್ಯ, ಸಿದ್ದು ಸವದಿ, ಸತೀಶ್ ರೆಡ್ಡಿ, ನೆಹರೂ ಓಲೆಕಾರ್, ಸೋಮಶೇಖರ್‌ ರೆಡ್ಡಿ, ಕರುಣಾಕರ್ ರೆಡ್ಡಿ ಸೇರಿದಂತೆ ಹಲವರು ಆಕ್ಷೇಪ ಹಾಗೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಸಕರ ಬೇಗುದಿ ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಸಂಪುಟ ವಿಸ್ತರಣೆ ಹೈಕಮಾಂಡ್‌ ನಿರ್ಧಾರ, ನಿಮ್ಮ ದೂರು, ಅಸಹನೆ ಏನೇ ಇದ್ದರೂ ಹೈಕಮಾಂಡ್‌ಗೆ ತಿಳಿಸಿ ಎನ್ನುವ ಮೂಲಕ ಬೀಸೋ ದೊಣ್ಣೆಯಿಂದ ಪಾರಾಗಲು ಯಡಿಯೂರಪ್ಪ ಯತ್ನಿಸುತ್ತಿದ್ದಾರೆ.


from India & World News in Kannada | VK Polls https://ift.tt/2XFb5uM

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...