ಸಿದ್ದರಾಮಯ್ಯ, ಡಿಕೆಶಿ ಮಧ್ಯೆ ಏನೇ ಇದ್ದರೂ ಕಾಂಗ್ರೆಸ್‌ ಕಾರ್ಯಕರ್ತರು ಒಗ್ಗಟ್ಟಾಗಿದ್ದಾರೆ; ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್‌ ಪಕ್ಷದ ಚಿಹ್ನೆಯಡಿ ಮಹಾನಗರ ಪಾಲಿಕೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಚರ್ಚಿಸಲು 10 ಜನರ ಕಮಿಟಿ ರಚಿಸಲಾಗಿದೆ. ಈಗಾಗಲೇ ಒಂದು ಬಾರಿ ಸಭೆ ನಡೆಸಲಾಗಿದ್ದು, ಕೆಲವರು ಪಕ್ಷದ ಚಿಹ್ನೆಯಡಿ ಸ್ಪರ್ಧೆ ಬೇಡ ಎಂದಿದ್ದಾರೆ. ಈ ವಿಚಾರದಲ್ಲಿಗೊಂದಲವಿದೆ. ಹೀಗಾಗಿ ಹೈಕಮಾಂಡ್‌ ನಿರ್ಧಾರಕ್ಕೆ ಕಾಯಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ತಿಳಿಸಿದರು. ನಗರದ ಕಾಂಗ್ರೆಸ್‌ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಡಿ.ಕೆ.ಶಿವಕುಮಾರ ಮತ್ತು ಅವರ ನಡುವಿನ ಭಿನ್ನಾಭಿಪ್ರಾಯದ ಕುರಿತು ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇಬ್ಬರ ನಡುವೆ ಏನೇ ಇದ್ದರೂ ಕಾಂಗ್ರೆಸ್‌ ಕಾರ್ಯಕರ್ತರು ಒಗ್ಗಟ್ಟಾಗಿದ್ದಾರೆ. ಪಕ್ಷ ಕಾರ‍್ಯಕರ್ತರಿಂದ ನಡೆಯುತ್ತದೆ. ಮುಂಬರುವ ವಿಧಾನಸಭೆ ಚುನಾವಣೆಯನ್ನು ಸಾಮೂಹಿಕ ನಾಯಕ್ವತದಲ್ಲಿ ಎದುರಿಸಲಾಗುವುದು. ಹೈಕಮಾಂಡ್‌ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡಲಿದೆ. ಹೀಗಾಗಿ ಕಾಂಗ್ರೆಸ್‌ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯ ಚರ್ಚೆ ಈಗ ಅಪ್ರಸ್ತುತ ಎಂದರು. ಸಿ.ಎಂ.ಇಬ್ರಾಹಿಂ ಅವರೊಂದಿಗೆ ನಾನು ಈಗಾಗಲೇ ಚರ್ಚೆ ಮಾಡಿದ್ದೇನೆ. ಅವರು ಪಕ್ಷ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ. ನಮ್ಮೊಂದಿಗೇ ಇರಲಿದ್ದಾರೆ. ಅವರು ಪಕ್ಷದೊಳಗಿನ ಕೆಲವು ಸಮಸ್ಯೆಗಳು ಬಗ್ಗೆ ಹೇಳಿದ್ದಾರೆ. ಅವುಗಳನ್ನು ಸರಿಪಡಿಸುವ ಪ್ರಯತ್ನ ಮಾಡಲಾಗುವುದು ಎಂದು ಸತೀಶ ಜಾರಕಿಹೊಳಿ ಹೇಳಿದರು.


from India & World News in Kannada | VK Polls https://ift.tt/2WZY6TR

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...