
ಜಿನೆವಾ: ಭಾರತದಲ್ಲಿ ಎರಡು ಲಸಿಕೆಗಳ ತುರ್ತು ಸಾರ್ವತ್ರಿಕ ಬಳಕೆಗೆ ಅನುಮತಿ ನೀಡಿರುವ, ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ() ನಿರ್ಧಾರವನ್ನು ವಿಶ್ವ ಆರೋಗ್ಯ ಸಂಸ್ಥೆ(WHO) ಸ್ವಾಗತಿಸಿದೆ. ಎರಡು ಕೊರೊನಾ ಲಸಿಕೆಗಳ ತುರ್ತು ಬಳಕೆಗೆ ಅನುಮತಿ ನೀಡಿರುವ ಭಾರತದ ನಿರ್ಧಾರ ಸ್ವಾಗತಾರ್ಹ. ಕೊರೊನಾ ವೈರಸ್ ವಿರುದ್ಧದ ದಿಟ್ಟ ಹೋರಾಟದಲ್ಲಿ ಭಾರತ ಅತ್ಯಂತ ಮಹತ್ವದ ಘಟ್ಟ ತಲುಪಿದೆ ಎಂದು WHO ಸಂತಸ ವ್ಯಕ್ತಪಡಿಸಿದೆ. ಈ ಕುರಿತು ಮಾತನಾಡಿರುವ ವಿಶ್ವ ಆರೋಗ್ಯ ಸಂಸ್ಥೆಯ ಆಗ್ನೇಯ ಏಷ್ಯಾ ಪ್ರದೇಶದ ಪ್ರಾದೇಶಿಕ ನಿರ್ದೇಶಕ ಡಾ.ಪೂನಂ ಖೇತ್ರಪಾಲ್ ಸಿಂಗ್, ಭಾರತದ ಈ ನಿರ್ಧಾರವನ್ನು ಐತಿಹಾಸಿಕ ಎಂದು ಬಣ್ಣಿಸಿದರು. ಮಾರಕ ಕೊರೊನಾ ವೈರಸ್ ವಿರುದ್ಧ ಭಾರತ ಅತ್ಯಂತ ದಿಟ್ಟ ಹೋರಾಟ ನಡೆಸುತ್ತಿದ್ದು, ಇದೀಗ ಲಸಿಕೆ ಬಳಕೆಗೆ ಅನುಮತಿ ನೀಡುವ ಮೂಲಕ ಈ ಹೋರಾಟದಲ್ಲಿ ಜಯ ಸಾಧಿಸುವ ಹಂತಕ್ಕೆ ಬಂದು ತಲುಪಿದೆ ಎಂದು ಡಾ.ಪೂನಂ ಖೇತ್ರಪಾಲ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ಭಾರತದಂತಹ ವಿಶಾಲ ದೇಶದಲ್ಲಿ ಲಸಿಕೆ ಹಂಚಿಕೆ ಹಾಗೂ ವಿತರಣೆ ನಿಜಕ್ಕೂ ಒಂದು ದೊಡ್ಡ ಸವಾಲಾಗಿದ್ದು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಸವಾಲನ್ನು ಸ್ವೀಕರಿಸಲಿದೆ ಮತ್ತು ಇದರಲ್ಲಿ ಯಶಸ್ಸು ಕಾಣಲಿದೆ ಎಂದು ಡಾ.ಪೂನಂ ಖೇತ್ರಪಾಲ್ ಸಿಂಗ್ ಭರವಸೆ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಈಗಾಗಲೇ ಡಿಸಿಜಿಐ ನಿರ್ಧಾರವನ್ನು ಸ್ವಾಗತಿಸಿದ್ದು, ಪ್ರತಿಯೊಬ್ಬರೂ ಹೆಮ್ಮೆಪಡಬೇಕಾದ ಕ್ಷಣವಿದು ತಂದು ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ.
from India & World News in Kannada | VK Polls https://ift.tt/34ZBxDp