ಮೈಸೂರು ರಾಜರು ಎಂದಿಗೂ ಯುದ್ಧ ಮಾಡಿದವರಲ್ಲ: ರೆಸಾರ್ಟ್ಸ್ ನಿಗಮದ ಅಧ್ಯಕ್ಷ ಎಂ. ಅಪ್ಪಣ್ಣ

ಚಾಮರಾಜನಗರ: ' ಶೋಕಿಯಾಗಿ ಸುಖವಾದ ಜೀವನ ನಡೆಸಿದರು' ಎಂದು ಜಂಗಲ್‌ ಲಾಡ್ಜಸ್‌ ಹಾಗೂ ರೆಸಾರ್ಟ್ಸ್ ನಿಗಮದ ಅಧ್ಯಕ್ಷ ಎಂ. ಅಪ್ಪಣ್ಣ ನೀಡಿರುವ ಹೇಳಿಕೆ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಇಲ್ಲಿನ ಡಾ.ಬಿ. ಆರ್‌. ಅಂಬೇಡ್ಕರ್‌ ಭವನದಲ್ಲಿ ನಡೆದ ಎಸ್ಟಿ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ನಾಯಕ ಸಮುದಾಯದ ಕುರಿತು ಅಭಿಮಾನದ ಮಾತನಾಡುವ ಭರದಲ್ಲಿ ''ಮೈಸೂರು ರಾಜರು ಎಂದಿಗೂ ಮಾಡಿದವರಲ್ಲ. ಆದರೆ ಮದಕರಿ ನಾಯಕನ ವಂಶಸ್ಥರು ನಿಜಕ್ಕೂ ಸೇನೆಯಲ್ಲಿಯುದ್ಧ ಮಾಡುವ ಜವಾಬ್ದಾರಿಯನ್ನು ನಿರ್ವಹಣೆ ಮಾಡಿದ್ದಾರೆ,'' ಎಂದು ಹೇಳಿದರು. ಇನ್ನು ಜಂಗಲ್‌ ಲಾಡ್ಜಸ್‌ ಹಾಗೂ ರೆಸಾರ್ಟ್ಸ್ ನಿಗಮದ ಅಧ್ಯಕ್ಷ ಎಂ. ಅಪ್ಪಣ್ಣ ನೀಡಿರುವ ಹೇಳಿಕೆ ಸದ್ಯ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಅಪ್ಪಣ್ಣ ಮಾತಿಗೆ ವಿರೋಧ ವ್ಯಕ್ತವಾಗಿದೆ. ಅನೇಕರು ಅವರ ಹೇಳಿಕೆಯನ್ನು ಟೀಕಿಸಿದ್ದಾರೆ.


from India & World News in Kannada | VK Polls https://ift.tt/2YqcsO3

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...