ಪಕ್ಷ ಸಂಘಟನೆಗೆ ಮುಂದಾದ ಕೈ ಮುಖಂಡರು, ರಾಜ್ಯದ ನಾಲ್ಕು ವಿಭಾಗಗಳಲ್ಲಿ ಸಭೆ ನಡೆಸಲು ಡಿಕೆಶಿ ನಿರ್ಧಾರ

ಬೆಂಗಳೂರು: ಮುಂಬರುವ ಚುನಾವಣೆಗಳ ದೃಷ್ಟಿಯಿಂದ ಪಕ್ಷವನ್ನು ತಳಮಟ್ಟದಲ್ಲಿ ಸಂಘಟನೆ ಮಾಡುವ ದೃಷ್ಟಿಯಲ್ಲಿ ರಾಜ್ಯ ನಾಲ್ಕು ವಿಭಾಗಗಳಲ್ಲಿ ಸಭೆ ನಡೆಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿರ್ಧರಿಸಿದ್ದಾರೆ. ಮೈಸೂರು, ಬೆಳಗಾವಿ, ಕಲಬುರ್ಗಿ ಹಾಗೂ ಬೆಂಗಳೂರು ವಿಭಾಗಗಳಲ್ಲಿ ಜನವರಿ 6 ರಿಂದ ಸಭೆ ನಡೆಯಲಿದೆ. ಜನವರಿ 6 ರಂದು ಮೈಸೂರು ವಿಭಾಗದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿರುವ ಸಾಗರ ಅಡಿಟೋರಿಯಂನಲ್ಲಿ ನಡೆಯಲಿದೆ. ಅದರಂತೆ ಬೆಂಗಳೂರಿನ ಆರ್‌ವಿ ಕಾಲೇಜಿನ ಪೂರ್ಣಿಯಾ ಪ್ಯಾಲೆಸ್‌ನಲ್ಲಿ ಬೆಂಗಳೂರು ವಿಭಾಗದ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಜನವರಿ 11 ರಂದು ಹುಬ್ಬಳ್ಳಿಯ ಕಾಟನ್ ಕೌಂಟಿ ರೆಸಾರ್ಟ್‌ನಲ್ಲಿ ದಾವಣಗೆರೆ ಒಳಗೊಂಡು ಬೆಳಗಾವಿ ವಿಭಾಗದ ಸಭೆ ಹಾಗೂ 18 ರಂದು ಕಲಬುರ್ಗಿ ವಿಭಾಗದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ , ಎಸ್‌ಆರ್ ಪಾಟೀಲ, ಈಶ್ವರ್‌ ಖಂಡ್ರೆ, ಸಲೀಂ ಅಹ್ಮದ್, ಸತೀಶ್ ಜಾರಕಿಹೊಳಿ ಸೇರಿದಂತೆ ಪ್ರಮುಖ ಮುಖಂಡರು ಭಾಗಿಯಾಗಲಿದ್ದಾರೆ. ಪ್ರತಿ ಜಿಲ್ಲೆಗಳ ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರು,ಸಂಸದರು, ಶಾಸಕರು, ರಾಜ್ಯಸಭಾ ಸದಸ್ಯರು, ಕೆಪಿಸಿಸಿ ಮಾಜಿ ಪದಾಧಿಕಾರಿಗಳು ಕೂಡಾ ಸಭೆಯಲ್ಲಿ ಹಾಜರಿರಲಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷ ಉತ್ತಮ ಸಾಧನೆ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಯನ್ನು ನೀಡಿದ್ದು ಈ ನಿಟ್ಟಿನಲ್ಲಿ ಮುಂಬರುವ ಚುನಾವಣೆಗಳಿಗೂ ಸಭೆಯಲ್ಲಿ ಸಿದ್ದತೆ ನಡೆಯಲಿದೆ. ಅಷ್ಟೇ ಅಲ್ಲದೆ ತಳ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾಗಿರುವ ಕಾರ್ಯಯೋಜನೆಗಳ ಬಗ್ಗೆಯೂ ವಿಭಾಗವಾರು ಸಭೆಯಲ್ಲಿ ಚರ್ಚೆ ನಡೆಯಲಿದೆ.


from India & World News in Kannada | VK Polls https://ift.tt/2LcZ10T

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...