ಜನವರಿ ತಿಂಗಳಾಂತ್ಯದಿಂದ ಕಂಬಳ ಕ್ರೀಡೆ ಆರಂಭ: ಸಂಸದ ನಳಿನ್‌ ಕುಮಾರ್‌ ಕಟೀಲ್‌

ಮಂಗಳೂರು: ಕರಾವಳಿ ಭಾಗದ ಜಾನಪದ ಕ್ರೀಡೆಯಾದ ಕಂಬಳವನ್ನು ಈ ಬಾರಿ ಕೋವಿಡ್‌ ಮಾರ್ಗಸೂಚಿ ಪಾಲಿಸಿಕೊಂಡು ಜನವರಿ ತಿಂಗಳಾಂತ್ಯದಿಂದ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಸ್ತುತ ಸಾಲಿನ ಕ್ರೀಡೆ ಸಂಬಂಧಿಸಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕರಾವಳಿ ಭಾಗದ ರೈತಾಪಿ ಜನರು ನವೆಂಬರ್‌-ಡಿಸೆಂಬರ್‌ ಮಾಸದಲ್ಲಿ ಭತ್ತದ ಕೊಯ್ಲಿನ ನಂತರದಿಂದ ಫೆಬ್ರವರಿ-ಮಾರ್ಚ್ ವರೆಗೆ ತಮ್ಮ ಮನೋರಂಜನೆಗಾಗಿ ಸಾಂಘಿಘಿಕ ಬಲದೂಂದಿಗೆ ಕಂಬಳವನ್ನು ನಡೆಸುತ್ತಾರೆ. ಜನವರಿ 30ರಿಂದ ಜಿಲ್ಲೆಯಲ್ಲಿ 10 ಕಂಬಳ ಕಾರ್ಯಕ್ರಮವನ್ನು ಏರ್ಪಡಿಸಬಹುದಾಗಿದೆ ಎಂದರು. ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ .ವಿ ಮಾತನಾಡಿ, ಕೋವಿಡ್‌ ಮಾರ್ಗಸೂಚಿ ಪಾಲಿಸಿಕೊಂಡು ಕಂಬಳ ನಡೆಸಬೇಕು. ರಾತ್ರಿ ಹತ್ತು ಗಂಟೆ ಒಳಗಾಗಿ ಕಂಬಳ ಕಾರ್ಯಕ್ರಮವನ್ನು ಪೂರ್ಣಗೊಳಿಸಬೇಕು ಎಂದರು. ಶಾಸಕರಾದ ಉಮಾನಾಥ್‌ ಕೋಟ್ಯಾನ್‌, ಯು.ಟಿ. ಖಾದರ್‌, ದ.ಕ. ಪೊಲೀಸ್‌ ಅಧೀಕ್ಷಕ ಲಕ್ಷ್ಮೀಪ್ರಸಾದ್‌, ಉಪ ಪೊಲೀಸ್‌ ಆಯುಕ್ತ ವಿನಯ್‌ ಗಾವಂಕರ್‌, ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ. ಟಿ. ಜಿ. ಪ್ರಸನ್ನ ಹಾಗೂ ಕಂಬಳ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.


from India & World News in Kannada | VK Polls https://ift.tt/3ce3ueV

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...