ರಾಷ್ಟ್ರ ರಾಜಧಾನಿಗೆ ಲಗ್ಗೆ ಇಟ್ಟ ಅನ್ನದಾತ: ಹೆದ್ದಾರಿಗಳಲ್ಲಿ 'ಟ್ರ್ಯಾಕ್ಟರ್ ಪ್ರವಾಹ'!

ಹೊಸದಿಲ್ಲಿ: ಕೇಂದ್ರದ ಕೃಷಿ ಕಾಯ್ದೆಗಳ ಜಾರಿಯನ್ನು ವಿರೋಧಿಸಿ ರೈತ ಸಂಘಟನೆಗಳು ಹಮ್ಮಿಕೊಂಡಿರುವ ಟ್ರ್ಯಾಕ್ಟರ್ ಪರೇಡ್‌ ಆರಂಭವಾಗಿದೆ. ಹರಿಯಾಣ, ಉತ್ತರ ಪ್ರದೇಶ ಸೇರಿದಂತೆ ವಿವಿಧ ಭಾಗಗಳಿಂದ ದೆಹಲಿ ಗಡಿಗೆ ಸಾವಿರಾರು ರೈತರು ಟ್ರ್ಯಾಕ್ಟರ್ ಸಮೇತ ಬಂದು ಸೇರುತ್ತಿದ್ದಾರೆ. ಈಗಾಗಲೇ ಸಿಂಘು ಗಡಿಯಲ್ಲಿ ಭಾರೀ ಸಂಖ್ಯೆಯಲ್ಲಿ ಜಮಾವಣೆಗೊಂಡಿರುವ ರೈತರು, ದೆಹಲಿಯೊಳಗೆ ತಮ್ಮ ಟ್ರ್ಯಾಕ್ಟರ್ ಸಮೇತ ಪ್ರವೇಶಿಸಲು ಕಾಯುತ್ತಿದ್ದಾರೆ. ಕೆಲವು ಕಡೆ ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿದು ನುಗ್ಗುತ್ತಿರುವ ರೈತರು, ಅನುಮತಿ ಪಡೆದ ಬಳಿಕವೂ ಬ್ಯಾರಿಕೇಡ್‌ಗಳನ್ನು ಹಾಕಿ ತಮ್ಮ ಪರೇಡ್‌ಗೆ ಅಡ್ಡಿಯನ್ನುಂಟು ಮಾಡುತ್ತಿರುವುದು ಸರಿಯಲ್ಲ ಎಂದು ರೈತರು ಈ ವೇಳೆ ಆಕ್ರೋಶ ವ್ಯಕ್ತಪಡಿಸಿದರು. ದೆಹಲಿ ಪೊಲೀಸರು ನೀಢಿದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ಭರವಸೆ ನೀಡಿರುವ ರೈತ ಸಂಘಟನೆಗಳು, ಶಾಂತಿಯುತ ಪ್ರತಿಭಟನೆ ನಡೆಸಲಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ರಾಜಪಥದಲ್ಲಿ ಸಶಸ್ತ್ರ ಪಡೆಗಳ ಪರೇಡ್ ಮುಕ್ತಾಯವಾದ ಬಳಿಕವಷ್ಟೇ ರೈತರಿಗೆ ದೆಹಲಿ ಪ್ರವೇಶಿಸಲು ಅನುಮತಿ ನೀಡಲಾಗಿದ್ದು, ಗಣರಾಜ್ಯೋತ್ಸವ ಸಮಾರಂಭದ ಮುಕ್ತಾಯಕ್ಕೆ ರರೈತರು ಕಾದು ಕುಳಿತಿದ್ದಾರೆ. ಕೃಷಿ ಕಾಯ್ದೆಗಳನ್ನು ಹಿಂಪಡೆಯುವವರಗೂ ತಮ್ಮ ಹೋರಾಟ ಮುಂದುವರೆಯಲಿದೆ ಎಂದು ಈಗಾಗಲೇ ಸ್ಪಷ್ಟಪಡಿಸಿರುವ ರೈತ ಸಂಘಟನೆಗಳು, ಮುಂದಿನ ಸುತ್ತಿನ ಮಾತುಕತೆಯಲ್ಲಿ ಕೇಂದ್ರ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸಲಿದೆ ಎಂಬ ಭರವಸೆ ಇರುವುದಾಗಿ ಹೇಳಿವೆ. ಒಟ್ಟಿನಲ್ಲಿ ಒಂದು ಕಡೆ ಗಣರಾಜ್ಯೋತ್ಸವ ಹಾಗೂ ಮತ್ತೊಂದು ಕಡೆ ರೈತರ ಇಡೀ ದೇಶದ ಗಮನ ಸೆಳೆದಿದೆ ಎಂದು ಹೇಳಬಹುದು.


from India & World News in Kannada | VK Polls https://ift.tt/36f83BZ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...