ಅಕ್ರಮ ಡಿನೋಟಿಫಿಕೇಷನ್: ಕೆಲವೇ ಕ್ಷಣದಲ್ಲಿ ಸುಪ್ರೀಂನಲ್ಲಿ ಬಿಎಸ್‌ವೈ ಅರ್ಜಿ ವಿಚಾರಣೆ

ಬೆಂಗಳೂರು: ಅಕ್ರಮ ಡಿನೋಟಿಫಿಕೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿರುವ ಆದೇಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮೊರೆ ಹೋಗಿದ್ದು ಇದರ ಅರ್ಜಿ ವಿಚಾರಣೆ ಬುಧವಾರ ನಡೆಯಲಿದೆ. ಅಕ್ರಮ ಡಿನೋಟಿಫೈ ಮಾಡಿರುವ ಆರೋಪದಲ್ಲಿ ವಿಚಾರಣೆ ನಡೆಸುವಂತೆ ಹೈಕೋರ್ಟ್‌ ನೀಡಿರುವ ಆದೇಶವನ್ನು ಪ್ರಶ್ನಿಸಿ ಬಿಎಸ್‌ವೈ ಹಾಗೂ ಸಚಿವ ಮುರುಗೇಶ್ ನಿರಾಣಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ದೇವನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ವಸತಿ ಯೋಜನೆಗೆ 26 ಎಕರೆ ಭೂಮಿ ಮಂಜೂರು ಮಾಡಿ ನಂತರ ನಕಲಿ ದಾಖಲೆ ಹಾಗೂ ಸಹಿ ಬಳಸಿಕೊಂಡು ಭೂಮಿಯನ್ನು ಹಿಂದಕ್ಕೆ ಪಡೆದಿರುವ ವಿಚಾರವಾಗಿ ಉದ್ಯಮಿ ಆಲಂ ಪಾಷಾ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಪ್ರಕರಣದ ಕುರಿತಾಗಿ ವಿಚಾರಣೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿದೆ. ತಮ್ಮ ವಿರುದ್ಧದ ವಿಚಾರಣೆಯನ್ನು ರದ್ದು ಮಾಡುವಂತೆ ಕೋರಿಬಿಎಸ್‌ ಯಡಿಯೂರಪ್ಪ ಹೈಕೋರ್ಟ್‌ನಲ್ಲಿ ಅರ್ಜಿಯನ್ನು ಸಲ್ಲಿಸಿದ್ದರು. ಆದ್ರೆ ಜ. 5ರಂದು ಹೈಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿತ್ತು. ಅರ್ಜಿ ವಜಾ ಜೊತೆಗೆ ಯಡಿಯೂರಪ್ಪ ಹಾಗೂ ಮುರುಗೇಶ್ ನಿರಾಣಿ ಅವರ ವಿಚಾರಣೆಗೆ ಆದೇಶಿಸಿತ್ತು. ಇದೀಗ ಇದನ್ನು ಪ್ರಶ್ನಿಸಿ ಬಿಎಸ್‌ವೈ ಸುಪ್ರೀಂ ಕದತಟ್ಟಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ಎ ಬೋಬ್ಡೆ, ನ್ಯಾಯಮೂರ್ತಿ ಎಎಸ್ ಬೋಪಣ್ಣ, ನ್ಯಾಯಮೂರ್ತಿ ವಿ. ರಾಮಸುಬ್ರಹ್ಮಣ್ಯಂ ಅವರ ನ್ಯಾಯಪೀಠ ಬುಧವಾರ ಅರ್ಜಿಗಳ ವಿಚಾರಣೆ ನಡೆಸಲಿದ್ದಾರೆ.


from India & World News in Kannada | VK Polls https://ift.tt/3pnBXM2

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...