ಕೇಂದ್ರ ಬಜೆಟ್‌ನಲ್ಲಿ ಶಿವಮೊಗ್ಗ ಜಿಲ್ಲೆಗೆ 112ಕೋಟಿ ರೂ. ಅನುದಾನ, ರೈಲು ಯೋಜನೆಗೆ ಒತ್ತು!

ಶಿವಮೊಗ್ಗ: ಜಿಲ್ಲೆಯ ರೈಲ್ವೆ ಯೋಜನೆಗಳಿಗೆ ಕೇಂದ್ರ ಬಜೆಟ್‌ನಲ್ಲಿ 112 ಕೋಟಿ ರೂ. ಅನುದಾನ ಒದಗಿಸಲಾಗಿದೆ. ದಶಕಗಳ ಕನಸಾದ ಶಿವಮೊಗ್ಗ-ಶಿಕಾರಿಪುರ- ರಾಣೆಬೆನ್ನೂರು ರೈಲು ಮಾರ್ಗದ ನಿರ್ಮಾಣಕ್ಕೆ 100 ಕೋಟಿ ರೂ. ಹಾಗೂ ಕೋಚಿಂಗ್‌ ಡಿಪೊ ನಿರ್ಮಾಣಕ್ಕೆ 12ಕೋಟಿ ರೂ. ಅನುದಾನ ಒದಗಿಸಿದೆ ಎಂದು ಸಂಸದ ಬಿವೈ ರಾಘವೇಂದ್ರ ತಿಳಿಸಿದ್ದಾರೆ. ಉತ್ತರ ಕರ್ನಾಟಕಕ್ಕೆ ನೇರ ಸಂಪರ್ಕ ಕಲ್ಪಿಸುವ ರಾಣೆಬೆನ್ನೂರು ರೈಲು ಸಂಪರ್ಕ ಅನುಷ್ಠಾನಕ್ಕೆ ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ಸರಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಸಚಿವರನ್ನುಹಲವು ಬಾರಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿದ ಸರಕಾರವು ಅನುದಾನ ಒದಗಿಸಿದೆ. ಯೋಜನೆಯಲ್ಲಿ ರೈಲು ಮಾರ್ಗ ನಿರ್ಮಾಣಕ್ಕೆ ಈಗಾಗಲೆ ಕೆಐಡಿಬಿ ಮೂಲಕ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಇದರಿಂದ ತ್ವರಿತ ಗತಿಯಲ್ಲಿ ಕಾಮಗಾರಿ ಅನುಷ್ಠಾನಕ್ಕೆ ಅನುಕೂಲವಾಗಿದೆ. ಮತ್ತೊಂದು ಕಡೆ ಭಾಗದಲ್ಲಿ ರೈಲು ಸಂಚಾರವನ್ನು ಹೆಚ್ಚಳ ಮಾಡಲಿಕ್ಕೆ ಮೂಲ ಅಗತ್ಯತೆಯಾದಂತಹ ಕೋಚಿಂಗ್‌ ಡೀಪೊವನ್ನು ನಗರ ಹೊರ ವಲಯದ ಕೋಟೆಗಂಗೂರಿನಲ್ಲಿ ನಿರ್ಮಿಸಲಾಗುತ್ತಿದೆ. ಅದಕ್ಕೆ ಬೇಕಾದಂತಹ ಹೆಚ್ಚುವರಿ ಖಾಸಗಿ ಜಮೀನಿನ ಭೂಸ್ವಾಧೀನ ಪ್ರಕ್ರಿಯೆ ಸಹ ಚಾಲ್ತಿಯಲ್ಲಿದೆ. ರೈಲ್ವೆ ಇಲಾಖೆಯು ಆರಂಭಿಕ ಕಾಮಗಾರಿ ಅನುಷ್ಠಾನಕ್ಕಾಗಿ ಟೆಂಡರ್‌ ಕರೆದು ಏಜೆನ್ಸಿ ನಿಗದಿಗೊಳಿಸಿದೆ. ಈ ಯೋಜನೆಗೂ ಮುಂಗಡ ಪತ್ರದಲ್ಲಿ12 ಕೋಟಿ ಮೀಸಲಿರಿಸಲಾಗಿದೆ. ಮುಂಗಡಪತ್ರದಲ್ಲಿ112 ಕೋಟಿ ರೂ. ಅನುದಾನ ಒದಗಿಸಲು ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ರೈಲ್ವೆ ಸಚಿವ ಪಿಯೂಷ್‌ ಗೋಯಲ್‌ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಜಿಲ್ಲೆಯ ಜನತೆ ಪರವಾಗಿ ಅಭಿನಂದನೆ ಹೇಳುವುದಾಗಿ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.


from India & World News in Kannada | VK Polls https://ift.tt/3tw2IQH

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...