ರಾಮಮಂದಿರಕ್ಕೆ 1 ಪೈಸೆ ಕೊಡಬೇಡಿ, ಅದು ರಾಮ ಮಂದಿರವಲ್ಲ, ಆರ್‌ಎಸ್‍ಎಸ್ ಮಂದಿರ: ಅನಿಸ್‌ ಅಹ್ಮದ್‌

ಮಂಗಳೂರು: ‘ರಾಮಮಂದಿರ ನಿರ್ಮಾಣಕ್ಕೆ ಒಂದೂ ಪೈಸೆ ಕೊಡಬೇಡಿ. ಅದು ರಾಮಮಂದಿರ ಅಲ್ಲ, ಆರ್‌ಎಸ್‍ಎಸ್ ಮಂದಿರ’ ಎಂದು ಪಿಎಫ್‍ಐ ಪ್ರಧಾನ ಕಾರ್ಯದರ್ಶಿ ಅನಿಸ್ ಅಹಮ್ಮದ್ ಹೇಳಿಕೆ ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಉಳ್ಳಾಲದಲ್ಲಿ ಎರಡು ದಿನಗಳ ಹಿಂದೆ ನಡೆದ 'ಯುನಿಟಿ ಮಾರ್ಚ್‌’ನಲ್ಲಿ ಪಿಎಫ್‌ಐ ಅನಿಸ್‌ ಅಹಮ್ಮದ್‌ ಮಾಡಿರುವ ಭಾಷಣ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ಹಿಂದೂ ಸಮುದಾಯವದರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ರಾಮಮಂದಿರ ದೇಣಿಗೆ ಸಂಗ್ರಹಿಸಲು ನಿಮ್ಮ ಮನೆ ಬಾಗಿಲಿಗೆ ಬಂದರೆ ಹಣ ಕೊಡಬೇಡಿ’ ಎಂದು ಮುಸ್ಲಿಮರಿಗೆ ಹೇಳಿದ್ದಾರೆ. ‘ದೇಶದಲ್ಲಿ ಶಾಂತಿ ಸ್ಥಾಪನೆಗೆ ಬಾಬ್ರಿ ಮಸೀದಿ ಜಾಗ ಬಿಟ್ಟು ಕೊಡಿ ಎಂದಿದ್ದರು. ಈಗ ಜಾಗ ಬಿಟ್ಟು ಕೊಟ್ಟಾಯ್ತು. ಆದರೆ ದೇಶದಲ್ಲಿ ಶಾಂತಿ ಸ್ಥಾಪನೆ ಆಯ್ತಾ? ಇನ್ನೂ ಮುಸ್ಲಿಮರ ಮೇಲೆ ದೌರ್ಜನ್ಯ ನಡೆಯುತ್ತಲೇ ಇದೆ. ಹಿಂದೂ ವಿರೋಧಿ ಸಂಘಟನೆ ನಮ್ಮದಲ್ಲ, ಆರ್ಎ‌ಸ್‍ಎಸ್ ಹಿಂದೂ ವಿರೋಧಿ ಸಂಘಟನೆ’ ಎಂದು ಹೇಳಿದ್ದಾರೆ. ‘ಆರ್‌ಎಸ್‍ಎಸ್ ಕ್ಯಾನ್ಸರ್ ಇದ್ದ ಹಾಗೆ. ಅದು ವಾಸಿ ಆಗಲ್ಲ. ದೇಶದಲ್ಲಿ ಹಿಂದೂ ವರ್ಸಸ್ ಮುಸ್ಲಿಂ ಅಲ್ಲ, ಮುಸ್ಲಿಂ ವರ್ಸಸ್ ಆರ್‌ಎಸ್‍ಎಸ್ ಪರಿಸ್ಥಿತಿ ನಿರ್ಮಾಣ ಆಗುತ್ತಿದೆ. ಪಿಎಫ್‍ಐನ ಶತ್ರುತ್ವ ಏನೇ ಇದ್ದರೂ ಆರ್ಎ‌ಸ್‍ಎಸ್ ಜೊತೆ ಮಾತ್ರ’ ಎಂದಿದ್ದಾರೆ. ಕಠಿಣ ಕ್ರಮ: ಗೃಹ ಸಚಿವ !ಇನ್ನು ಕೋಮುಪ್ರಚೋದನಾಕಾರಿ ಭಾಷಣ ಮಾಡಿರುವ ಪಾಪ್ಯುಲರ್‌ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ಮಂಗಳೂರಿನ ಉಳ್ಳಾಲದಲ್ಲಿ ಪಿಎಫ್‌ಐ ಮುಖಂಡರು ನೀಡಿರುವ ಹೇಳಿಕೆ ದೇಶ ವಿರೋಧಿ ಮತ್ತುಅಸಂವಿಧಾನಿಕ ಎಂದರು. ದೇಶದ ಜನತೆಯನ್ನು ಒಡೆಯುವ ಪ್ರಯತ್ನದ ಹೇಳಿಕೆಗಳನ್ನು ಪಿಎಫ್‌ಐ ಮುಖಂಡರು ನೀಡಿದ್ದಾರೆ. ಆರ್‌ಎಸ್‌ಎಸ್ ವಿರುದ್ಧ ಮಾತನಾಡಿದ್ದಾರೆ. ಆರ್ ಎಸ್ ಎಸ್ ಸಂಘಟನೆ ಒಂದು ದೇಶಭಕ್ತಿಯ ಪ್ರತೀಕ, ನಿರ್ಮಿಸುವಂತೆ ಈಗಾಗಲೇ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಆ ಬಗ್ಗೆ ಪಿಎಫ್‌ಐ ನಾಯಕರು ಮಾತನಾಡಿರುವುದು ಆಕ್ಷೇಪಾರ್ಹ ಎಂದಿದ್ದಾರೆ.


from India & World News in Kannada | VK Polls https://ift.tt/3dtA2T1

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...