ಸಮುದಾಯಕ್ಕೆ 2A ಮೀಸಲಾತಿ ನೀಡುವ ವಿಚಾರವಾಗಿ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದೇವೆ. ಸಂವಿಧಾನದ ಪ್ರಕಾರ ಆಯೋಗದ ಮೂಲಕವೇ ಶಿಫಾರಸು ಬರಬೇಕು ಎಂದು ಗೃಹ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಆಯೋಗ ಸಭೆ ನಡೆಸಿ ಈ ಬಗ್ಗೆ ಸಮಾಲೋಚಿಸಲಿದೆ. ಮೀಸಲಾತಿ ನೀಡಲು ಸಂವಿಧಾನದ ಪ್ರಕಾರ ಹಿಂದುಳಿದ ವರ್ಗಗಳ ಆಯೋಗವೇ ಶಿಫಾರಸು ಮಾಡಬೇಕು. ಆಯೋಗದ ಮೂಲಕವೇ ಶಿಫಾರಸು ಬರಬೇಕು. ಈ ಮಧ್ಯೆ ಇಂದು ಪಂಚಮಸಾಲಿ ಸಮಾವೇಶ ನಡೀತಿದೆ. ಸ್ವಾಮೀಜಿಗಳ ಜತೆ ಈಗಾಗಲೇ ಮಾತಾಡಿದ್ದೇವೆ ಎಂದರು. ಮೀಸಲಾತಿ ನೀಡುವ ವಿಚಾರವಾಗಿ ಸರಕಾರ ಇದುವರೆಗೂ ತೆಗೆದುಕೊಂಡ ಕ್ರಮಗಳ ಕುರಿತು ಸ್ವಾಮೀಜಿಗಳಿಗೆ ಮನವರಿಕೆ ಮಾಡಿಕೊಡುತ್ತೇವೆ. ಸಮಾವೇಶದಲ್ಲೂ ಈ ವಿಚಾರವನ್ನು ಹೇಳುತ್ತೇವೆ. ಮಾತುಕತೆಗೆ ಬನ್ನಿ ಎಂದು ಸ್ವಾಮೀಜಿಗಳನ್ನು ಆಹ್ವಾನಿಸುತ್ತೇವೆ ಎಂದು ಹೇಳಿದರು. ಸಿಎಂ ಬಿಎಸ್ ಯಡಿಯೂರಪ್ಪ ಅವರು ಕೂಡ ಇದೇ ಮಾತನ್ನು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ನಡೆಸಬೇಕಾದ ಪ್ರಕ್ರಿಯೆ ಕುರಿತು ಮಾತುಕತೆ ಮೂಲಕ ಚರ್ಚೆ ಮಾಡೋಣ ಎಂಬುದು ಮುಖ್ಯಮಂತ್ರಿಗಳ ನಿಲುವು ಎಂದು ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು. ಇತ್ತ ಅರಮನೆ ಮೈದಾನದಲ್ಲಿ ಪಂಚಮಸಾಲಿ ಸಮುದಾಯದಿಂದ ಬೃಹತ್ ಸಮಾವೇಶ ನಡೆಯುತ್ತಿದ್ದು, ಲಕ್ಷಾಂತರ ಜನ ಸೇರಿದ್ದಾರೆ. ಮೀಸಲಾತಿ ಆದೇಶ ಪತ್ರ ನೀಡುವವರೆಗೂ ನಾವು ಹೋರಾಟ ನಿಲ್ಲಿಸಲ್ಲ ಎಂದಿರುವ ಸ್ವಾಮೀಜಿಗಳು. ವಿಧಾನಸೌಧದ ಮುಂದೆ ಉಪವಾಸ ಸತ್ಯಾಗ್ರಹ ನಡೆಸುವ ಎಚ್ಚರಿಕೆಯನ್ನು ಸರಕಾರಕ್ಕೆ ನೀಡಿದ್ದಾರೆ.
from India & World News in Kannada | VK Polls https://ift.tt/3qERx6F