40 ಲಕ್ಷ ಟ್ರ್ಯಾಕ್ಟರ್‌ಗಳೊಂದಿಗೆ ಸಂಸತ್‌ಗೆ ಮುತ್ತಿಗೆ ಹಾಕುತ್ತೇವೆ: ಕೇಂದ್ರ ಸರ್ಕಾರಕ್ಕೆ ಟಿಕಾಯತ್‌ ವಾರ್ನಿಂಗ್‌

ಶಿಖರ್‌ (ರಾಜಸ್ಥಾನ): ದೇಶಾದ್ಯಂತ ಭಾರೀ ವಿವಾದ ಸೃಷ್ಠಿಸಿರುವ ಕೃಷಿ ಕಾಯ್ದೆಯನ್ನು ಹಿಂಪಡೆಯದೇ ಹೋದರೇ, 40 ಲಕ್ಷ ಟ್ರ್ಯಾಕ್ಟರ್‌ಗಳೊಂದಿಗೆ ಸಂಸತ್‌ಗೆ ಮುತ್ತಿಗೆ ಹಾಕುವುದಾಗಿ ರೈತ ನಾಯಕ ಎಚ್ಚರಿಕೆ ನೀಡಿದ್ದಾರೆ. ಜನ ಬೀದಿಗೆ ಬಂದಾಗೆಲ್ಲಾ ಸರ್ಕಾರಗಳು ಪತನವಾಗಿದೆ ಎಂದು ಹರ್ಯಾಣದ ಹೇಳಿದ ಮರುದಿನವೇ ರಾಕೇಶ್‌ ಅವರಿಂದ ಈ ಹೇಳಿಕೆ ಹೊರ ಬಿದ್ದಿದೆ. ಆ ಮೂಲಕ ರೈತರ ಹೋರಾಟ ಮತ್ತಷ್ಟು ತೀವ್ರವಾಗಲಿದೆ ಎನ್ನುವ ಸಂದೇಶ ರವಾನಿಸಿದ್ದಾರೆ. ರಾಜಸ್ಥಾನದ ಶಿಖರ್‌ನಲ್ಲಿ ನಡೆದ ಕಿಸಾನ್‌ ಮಹಾಪಂಚಾಯತ್‌ ಬೃಹತ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇದು ಸಂಸತ್‌ಗೆ ಘೇರಾವ್‌ ಹಾಕಲು ಕರೆ ಕೊಡುವ ಸಮಯ. ಸಂಸತ್‌ ಮಾರ್ಚ್‌ ಬಗ್ಗೆ ಸದ್ಯದಲ್ಲೇ ಘೋಷಣೆ ಮಾಡುತ್ತೇವೆ. ಆದರೆ ಈ ಬಾರಿ ನಾಲ್ಕು ಲಕ್ಷ ಅಲ್ಲ ನಲ್ವತ್ತು ಲಕ್ಷ ಟ್ರ್ಯಾಕ್ಟರ್‌ಗಳೊಂದಿಗೆ ಸಂಸತ್‌ಗೆ ಮುತ್ತಿಗೆ ಹಾಕುತ್ತೇವೆ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಈ ದೆಹಲಿ ಮಾರ್ಚ್‌ಗೆ ಎಲ್ಲರೂ ತಯಾರಾಗಿರಬೇಕು ಎಂದು ರೈತರಲ್ಲಿ ಭಿನ್ನವಿಸಿಕೊಂಡಿದ್ದಾರೆ. ಅಲ್ಲದೇ ಇಂಡಿಯಾ ಗೇಟ್‌ ಬಳಿ ಇರುವ ಉದ್ಯಾನವನಗಳಲ್ಲಿ ಉಳುಮೆ ಮಾಡಿ, ಅಲ್ಲಿ ಗಿಡ ನೆಡುತ್ತೇವೆ ಎಂದು ಹೇಳಿದ್ದಾರೆ. ಸಂಯುಕ್ತ ರೈತ ಸಂಘಟನೆಯ ನಾಯಕರು ಇಷ್ಟರಲ್ಲೇ ದಿನಾಂಕ ಅಂತಿಮಗೊಳಿಸಲಿದ್ದಾರೆ ಎಂದು ಟಿಕಾಯತ್‌ ಹೇಳಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ಅವರು, ಒಂದು ವೇಳೆ ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆದು, ಕನಿಷ್ಠ ಬೆಂಬಲ ಬೆಲೆ ಘೋಷಿಸದೇ ಹೋದರೇ ದೇಶದಲ್ಲಿರುವ ದೊಡ್ಡ ದೊಡ್ಡ ಕಂಪನಿಗಳ ಗೋದಾಮನ್ನು ನಾಶ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದೇ ವೇಳೆ ಜನವರಿ 26ರ ಹಿಂಸಾಚಾರಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ದೂರಿರುವ ಅವರು, ರೈತರು ಯಾವತ್ತೂ ಇಂಥ ಕೆಲಸ ಮಾಡುವುದಿಲ್ಲ. ರೈತರು ತ್ರಿವರ್ಣ ಧ್ವಜವನ್ನು ಗೌರವಿಸುತ್ತಾರೆ. ಆದರೆ ರಾಜಕಾರಣಿಗಳು ಗೌರವಿಸುವುದಿಲ್ಲ ಎಂದು ಹೇಳಿದ್ದಾರೆ.


from India & World News in Kannada | VK Polls https://ift.tt/3ku62YN

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...