ಶಿವಮೊಗ್ಗ ಘಟನೆ ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್ ಸ್ಫೋಟ: 8 ಜನರು ಸಾವು

ಚಿಕ್ಕಬಳ್ಳಾಪುರ: ಶಿವಮೊಗ್ಗದಲ್ಲಿ ನಡೆದ ಜಿಲೆಟಿನ್ ಸ್ಫೋಟ ದುರಂತ ಪ್ರಕರಣದ ನೋವು ಮಾಸುವ ಮುನ್ನವೇ ಮತ್ತೆ ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್ ಸ್ಫೋಟ ಪ್ರಕರಣ ನಡೆದಿದೆ. ಕ್ವಾರಿಯಲ್ಲಿ ಜಿಲೆಟಿನ್‌ ಸ್ಪೋಟದಿಂದ ಐವರು ದಾರುಣವಾಗಿ ಸಾವನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್‌ ಹೋಬಳಿಯ ಹಿರೇನಾಗವೇಲಿ ಗ್ರಾಮದ ಬಳಿ ನಡೆದಿದೆ. ಏಕಾಏಕಿ ಜಿಲೆಟಿನ್‌ನಿಂದಾಗಿ ಭಾರೀ ಸ್ಪೋಟ ನಡೆದಿದ್ದು ಸ್ಪೋಟದ ರಭಸಕ್ಕೆ ಮೃತ ದೇಹಗಳು ಛಿದ್ರ ಛಿದ್ರವಾಗಿದೆ. 1000 ಅಡಿ ದೂರಕ್ಕೆ ಸ್ಪೋಟದ ತೀವ್ರತೆಗೆ ಮೃತದೇಹಗಳ ಭಾಗಗಳು ಚೆಲ್ಲಾಪಿಲ್ಲಿಯಾಗಿವೆ. ಇನ್ನು ಇತ್ತೀಚೆಗೆ ಈ ಕ್ವಾರಿ ಮೇಲೆ ಪೊಲೀಸರು, ಜಿಲ್ಲಾಡಳಿತ ದಾಳಿ ನಡೆಸಿ ಅಕ್ರಮ ಸ್ಪೋಟಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚಿಕ್ಕಬಳ್ಳಾಪುರ ಎಸ್ಪಿ ಮಿಥುನ್‌ಕುಮಾರ್‌, ರಾತ್ರಿ ಸುಮಾರು 12.30ರಿಂದ 12.45ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಆದರೆ ಯಾವ ಬಗೆಯ ಸ್ಫೋಟಕಗಳು ಎಂಬುದು ಪತ್ತೆಯಾಗಿಲ್ಲ. ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸ್ಥಳದಲ್ಲೇ ಕ್ವಾರಿ ಸಮೀಪವಿರುವ ಅರಣ್ಯ ಪ್ರದೇಶದಲ್ಲಿ ಸ್ಫೋಟ ನಡೆದಿದೆ. ಗುಡಿಬಂಡೆ ನಾಗರಾಜ್, ರಾಘವೇಂದ್ರ, ಗಂಗೋಜಿರಾವ್, ಮತ್ತೋರ್ವ ಸೇರಿದಂತೆ ನಾಲ್ವರ ಒಡೆತನದ ಕ್ವಾರಿ ಇದು. ನಾಲ್ವರೂ ಭ್ರಮರ ವರ್ಷಿಣಿ ಹೆಸರಿನ ಕ್ವಾರಿ ಮಾಲೀಕರು. ಫೆಬ್ರವರಿ 7ರಂದು ಕ್ವಾರಿ ಮೇಲೆ ದಾಳಿ ನಡೆಸಿ ಅಕ್ರಮ ಸ್ಫೋಟಕ ಜಪ್ತಿ ಮಾಡಿ ಗುಡಿಬಂಡೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ. ಇನ್ನು ಸ್ಥಳಕ್ಕೆ ಜಿಲ್ಲಾಧಿಕಾರಿ ಲತಾ.ಆರ್, ಎಸ್ಪಿ ಮಿಥುನ್ ಕುಮಾರ್, ಎಸಿ ರಘುನಂದನ್, DySP ರವಿಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


from India & World News in Kannada | VK Polls https://ift.tt/37AysuI

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...