
ಹೊಸದಿಲ್ಲಿ: ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ 2-1 ಅಂತರದಲ್ಲಿ ಐತಿಹಾಸಿಕ ಟೆಸ್ಟ್ ಸರಣಿ ಗೆದ್ದು ಸತತ ಎರಡನೇ ಬಾರಿ ಬಾರ್ಡರ್-ಗವಾಸ್ಕರ್ ಟ್ರೋಫಿ ಮುಡಿಗೇರಿಸಿಕೊಂಡಿತ್ತು. ಟೀಮ್ ಇಂಡಿಯಾದ ಈ ಐತಿಹಾಸಿಕ ಸಾಧನೆಯಲ್ಲಿ ಹಿರಿಯ ಆಟಗಾರರಿಗಿಂತ ಯುವ ಆಟಗಾರರ ಕೊಡುಗೆ ಮಹತ್ವದ್ದಾಗಿತ್ತು. ಯುವ ವೇಗಿ ಮೊಹಮ್ಮದ್ ಸಿರಾಜ್, ಆರಂಭಿಕ ಬ್ಯಾಟ್ಸ್‌ಮನ್ , , ವಾಷಿಂಗ್ಟನ್ ಸುಂದರ್ ಅವರ ಅಮೋಘ ಪ್ರದರ್ಶನದ ಸಹಾಯದಿಂದ ಭಾರತ ತಂಡ ಟೆಸ್ಟ್ ಸರಣಿಯಲ್ಲಿ ಸಾರ್ವಕಾಲಿಕ ಶ್ರೇಷ್ಠ ಸಾಧನೆ ಮಾಡಿತ್ತು. ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್‌ಪ್ರಿತ್ ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಮೊಹಮ್ಮದ್ ಸಿರಾಜ್ ಬ್ರಿಸ್ಬೇನ್ ಟೆಸ್ಟ್‌ನಲ್ಲಿ ತಾನೇ ವೇಗದ ಬೌಲಿಂಗ್ ಅನ್ನು ಮುನ್ನಡೆಸಿದ್ದರು. ಅದರಂತೆ ವೃತ್ತಿ ಜೀವನದ ಚೊಚ್ಚಲ ಐದು ವಿಕೆಟ್ ಸಾಧನೆ ಮಾಡಿದ್ದರು. ರಿಷಭ್ ಪಂತ್ ಸಿಡ್ನಿಯಲ್ಲಿ 97 ಹಾಗೂ ದಿ ಗಬ್ಬಾದಲ್ಲಿ ಅಜೇಯ 89 ರನ್ ಗಳಿಸಿದ್ದರು. ಆಸ್ಟ್ರೇಲಿಯಾ ಪ್ರವಾಸದಲ್ಲಿ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಆರಂಭಿಕ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಕೂಡ ಗಮನಾರ್ಹ ಪ್ರದರ್ಶನ ತೋರಿದ್ದರು. ಬ್ರಿಸ್ಬೇನ್ ಟೆಸ್ಟ್ ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಮಾಡಿದ್ದ ಗಿಲ್ 91 ರನ್ ಗಳಿಸಿ ಭಾರತದ ಗೆಲುವಿಗೆ ನೆರವಾಗಿದ್ದರು. ಶುಭಮನ್ ಗಿಲ್ ಬ್ಯಾಟಿಂಗ್ ಬಗ್ಗೆ ಆಸ್ಟ್ರೇಲಿಯಾ ಮಾಜಿ ಸ್ಪಿನ್ನರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶುಭಮನ್ ಗಿಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದೊಡ್ಡ ಆಟಗಾರನಾಗಿ ಬೆಳೆಯುತ್ತಾನೆಂದು ಬ್ರಾಡ್ ಹಾಗ್ ಭವಿಷ್ಯ ನುಡಿದಿದ್ದಾರೆ. "ಅವರ(ಶುಭಮನ್ ಗಿಲ್) ಪುಸ್ತಕದಲ್ಲಿ ಎಲ್ಲಾ ಶಾಟ್‌ಗಳು ಒಳಗೊಂಡಿವೆ. ಆಸ್ಟ್ರೇಲಿಯಾ ನೆಲದಲ್ಲಿ ಅವರಿಗೆ ನಮ್ಮ ಬೌಲರ್‌ಗಳು ಎಲ್ಲಾ ರೀತಿಯಲ್ಲೂ ಸತ್ವ ಪರೀಕ್ಷೆ ಮಾಡಿದ್ದರು. ಅದರಂತೆ ಶಾರ್ಟ್ ಎಸೆತಗಳನ್ನು ಪ್ರಯೋಗ ಮಾಡಿದ್ದರು, ಆದರೆ, ಯುವ ಬ್ಯಾಟ್ಸ್‌ಮನ್ ಫುಲ್ ಹಾಗೂ ಹುಕ್ ಶಾಟ್‌ಗಳ ಮೂಲಕ ಗಮನ ಸೆಳೆದಿದ್ದರು. ಇದು ನನಗೆ ತುಂಬಾ ಇಷ್ಟವಾಯಿತು," ಎಂದು ಗುಣಗಾನ ಮಾಡಿದರು. "ಗಿಲ್ ಬ್ಯಾಟಿಂಗ್ ಪ್ರದರ್ಶನ ನೋಡುತ್ತಿದ್ದರೆ ಮುಂದೊಂದು ದಿನ ಅವರು ದಂತಕತೆಯಾಗುವ ಲಕ್ಷಣಗಳು ಕಾಣುತ್ತಿವೆ ಹಾಗೂ ಮುಂದಿನ 10 ವರ್ಷಗಳಲ್ಲಿ ವಿಶ್ವದ ಟೆಸ್ಟ್ ಕ್ರಿಕೆಟ್‌ನ ಅತ್ಯುತ್ತಮ ಆರಂಭಿಕರಲ್ಲಿ ಒಬ್ಬರಾಗಲಿದ್ದಾರೆ," ಎಂದು ಬ್ರಾಡ್ ಹಾಗ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಭವಿಷ್ಯ ನುಡಿದಿದ್ದಾರೆ. ಪೃಥ್ವಿ ಶಾ ಅವರ ಬದಲು ಮೆಲ್ಬೋರ್ನ್ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಗಿಲ್, ಪ್ರಥಮ ಇನಿಂಗ್ಸ್‌ನಲ್ಲಿ 45 ರನ್ ಗಳಿಸಿ ಗಮನ ಸೆಳೆದರು ಹಾಗೂ ದ್ವಿತೀಯ ಇನಿಂಗ್ಸ್‌ನಲ್ಲಿ ಅಜೇಯ 35 ರನ್ ಗಳಿಸಿದರು. ಆ ಮೂಲಕ ಭಾರತದ ಎಂಟು ವಿಕೆಟ್‌ಗಳ ಗೆಲುವಿಗೆ ನೆರವಾಗಿದ್ದರು. ಇನ್ನು ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಬಲಗೈ ಬ್ಯಾಟ್ಸ್‌ಮನ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು, ಆ ಮೂಲಕ ವೃತ್ತಿ ಜೀವನದ ಚೊಚ್ಚಲ ಅರ್ಧಶತಕ ಸಿಡಿಸಿದರು. ಇನ್ನೂ ಸರಣಿ ನಿರ್ಣಾಯಕ ಟೆಸ್ಟ್ ಬ್ರಿಸ್ಬೇನ್‌ನಲ್ಲಿ ಆಸ್ಟ್ರೇಲಿಯಾ ನೀಡಿದ್ದ 328 ರನ್ ಗುರಿ ಹಿಂಬಾಲಿಸಿದ ಭಾರತದ ಪರ ಗಿಲ್ 91 ರನ್ ಗಳಿಸಿ ತಂಡದ ಗೆಲುವಿಗೆ ಸಹಾಯ ಮಾಡಿದ್ದರು. ಫೆ.5 ರಿಂದ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗುತ್ತಿವೆ. ಶುಭಮನ್ ಗಿಲ್ ಪರ ಆರಂಭಿಕ ಬ್ಯಾಟ್ಸ್‌ಮನ್ ಆಗಿ ಕಣಕ್ಕೆ ಇಳಿಯಲಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3oGohKI