ಗುರುವಾರವೇ ಪ್ರತಾಪ್‌ ಚಂದ್ರ ಶೆಟ್ಟಿ ರಾಜೀನಾಮೆ ಸಾಧ್ಯತೆ; ಹೊರಟ್ಟಿ ಹಾದಿ ಸುಗಮ..!

: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಬುಧವಾರ ರಾತ್ರಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ರಾಜೀನಾಮೆ ನಿರ್ಧಾರವನ್ನು ಪ್ರತಾಪ್‌ ಚಂದ್ರ ಶೆಟ್ಟಿ ಅವರ ವಿವೇಚನೆಗೆ ಬಿಡಲಾಗಿದೆ. ಸಭಾಪತಿ ವಿರುದ್ಧ ಈಗಾಗಲೇ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದೆ. ನಿಯಮಗಳ ಪ್ರಕಾರ ಈ ಬಗ್ಗೆ ನಿರ್ಧಾರ ಕೈಗೊಳ್ಳಲು ಸಭಾಪತಿಗೆ ಐದು ದಿನಗಳ ಕಾಲವಕಾಶ ಇರುತ್ತದೆ. ಶುಕ್ರವಾರ ಅವಧಿ ಮುಕ್ತಾಯವಾಗುವ ಹಿನ್ನೆಲೆ ಗುರುವಾರವೇ ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಾಗಿದೆ. ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ವಿಚಾರವಾಗಿ ಡಿಸೆಂಬರ್ 15ರಂದು ಪರಿಷತ್‌ನಲ್ಲಿ ಕೋಲಾಹಲವೇ ನಡೆದಿತ್ತು. ಈ ಘಟನೆಯ ಬಗ್ಗೆ ಮರಿತಿಬ್ಬೇಗೌಡ ನೇತೃತ್ವದಲ್ಲಿ ಸದನ ಸಮಿತಿ ಈಗಾಗಲೇ ಮಧ್ಯಂತರ ವರದಿಯನ್ನು ನೀಡಿದೆ. ಈ ವರದಿಯಲ್ಲಿ ಡಿಸಿಎಂ ಡಾ.ಅಶ್ವತ್ಥ ನಾರಾಯಣ, ಸಚಿವ ಜೆ.ಸಿ.ಮಾಧುಸ್ವಾಮಿ ಸೇರಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸದಸ್ಯರು ಸದನದ ನಿಯಮಾವಳಿ ವಿರುದ್ಧ ನಡೆದುಕೊಂಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಇನ್ನು, ಉಪಸಭಾಪತಿಯಾಗಿ ಬಿಜೆಪಿಯ ಎಂ.ಕೆ ಪ್ರಾಣೇಶ್ ಆಯ್ಕೆಗೊಂಡಿದ್ದಾರೆ. ಉಪಸಭಾಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲ ನೀಡಿತ್ತು. ಉಪಸಭಾಪತಿ ಆಯ್ಕೆಯ ಬಳಿಕ ಸಭಾಪತಿ ಪ್ರತಾಪ್‌ ಚಂದ್ರ ಶೆಟ್ಟಿ ರಾಜೀನಾಮೆ ಕೊಡುತ್ತಾರೆ ಎಂ‌ಬ ನಿರೀಕ್ಷೆ ಇತ್ತು. ಈ ಹಿನ್ನೆಲೆಯಲ್ಲಿ ಬಹುತೇಕ ಗುರುವಾರ ರಾಜೀನಾಮೆ ಸಾಧ್ಯತೆ ಹೆಚ್ಚಾಗಿದೆ. ಈ ಸ್ಥಾನಕ್ಕೆ ಜೆಡಿಎಸ್‌ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಆಯ್ಕೆ ಬಹುತೇಕ ಖಚಿತವಾಗಿದೆ. ಈಗಾಗಲೇ ಪರಿಷತ್‌ನಲ್ಲಿ ಜೆಡಿಎಸ್‌ ಹಾಗೂ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿರುವುದರಿಂದ ಹೊರಟ್ಟಿ ಆಯ್ಕೆಗೆ ಬಿಜೆಪಿ ಬೆಂಬಲ ನೀಡುವುದು ಪಕ್ಕಾ ಆಗಿದೆ.


from India & World News in Kannada | VK Polls https://ift.tt/2YIVcUI

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...