ಬೆಂಗಳೂರು: ಚಿಕ್ಕಬಳ್ಳಾಪುರದ ಗುಡಿಬಂಡೆ ತಾಲೂಕಿನ ಹಿರೆನಾಗವಳ್ಳಿಯಲ್ಲಿ ನಡೆದ ಸ್ಫೋಟ ಪ್ರಕರಣದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವ ತಿಳಿಸಿದ್ದಾರೆ. ಘಟನೆಯ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಹಿರೆನಾಗವಳ್ಳಿಯಲ್ಲಿ ನಡೆದ ಸಂಭವಿಸಿದ ಸ್ಫೋಟಕ್ಕೆ 5 ಜನರು ಸಾವನ್ನಪ್ಪಿರುವ ಸುದ್ದಿ ಕೇಳಿ ನನ್ನ ಮನಸ್ಸಿಗೆ ತೀವ್ರ ಆಘಾತವಾಯಿತು.ಅವರ ಆತ್ಮಕ್ಕೆ ಚಿರಶಾಂತಿಸಿಗಲಿ.ಹಾಗೂ ಸಂತ್ರಸ್ತರ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದಿದ್ದಾರೆ. ಶಿವಮೊಗ್ಗ ಸ್ಫೋಟದ ನಂತರ ಇಂತಹ ಘಟನೆ ನಡೆದಿರುವುದು ತುಂಬಾ ದುರದೃಷ್ಟಕರ. ಸರ್ಕಾರ ಸೂಕ್ತ ತನಿಖೆ ನಡೆಸಿ ಇದರಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ.ಇದರಲ್ಲಿ ಯಾರೇ ಭಾಗಿಯಾದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಜರಿಗುಸುತ್ತೇವೆ.ಎಷ್ಟೇ ಪ್ರಭಾವಿಗಳಗಾಗಿದ್ದರೂ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ. ಜಿಲ್ಲೆಯ ಕ್ವಾರಿಯಲ್ಲಿ ಜಿಲೆಟಿನ್ ಸ್ಪೋಟದಿಂದ ಐವರು ದಾರುಣವಾಗಿ ಸಾವನಪ್ಪಿದ್ದಾರೆ. ಏಕಾಏಕಿ ಭಾರೀ ಸ್ಪೋಟ ನಡೆದಿದ್ದು ಸ್ಪೋಟದ ರಭಸಕ್ಕೆ ಮೃತ ದೇಹಗಳು ಛಿದ್ರ ಛಿದ್ರವಾಗಿದೆ. 1000 ಅಡಿ ದೂರಕ್ಕೆ ಸ್ಪೋಟದ ತೀವ್ರತೆಗೆ ಮೃತದೇಹಗಳ ಭಾಗಗಳು ಚೆಲ್ಲಾಪಿಲ್ಲಿಯಾಗಿವೆ. ಇತ್ತೀಚೆಗಷ್ಟೇ ಶಿವಮೊಗ್ಗ ಜಿಲ್ಲೆಯಲ್ಲೂ ಇಂತಹ ಸ್ಫೋಟ ನಡೆದಿತ್ತು. ಅಮಾಯಕ ಕಾರ್ಮಿಕರು ಸ್ಫೋಟದಿಂದಾಗಿ ಮೃತಪಟ್ಟಿದ್ದರು. ಘಟನೆಯ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ತಿಳಿಸಿತ್ತು. ಆದರೆ ಇದೀಗ ಶಿವಮೊಗ್ಗ ಸ್ಫೋಟದ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಸ್ಫೋಟ ನಡೆದು ಐವರು ಪ್ರಾಣ ಕಳೆದುಕೊಂಡಿದ್ದಾರೆ.
from India & World News in Kannada | VK Polls https://ift.tt/37GExpD