ಮಂಗಳೂರು ರೈಲ್ವೇ ನಿಲ್ದಾಣಕ್ಕೆ ನಾರಾಯಣ ಗುರು ಹೆಸರಿಡುವಂತೆ ಸದನದಲ್ಲಿ ಧ್ವನಿಯೆತ್ತಿದ ಯುಟಿ ಖಾದರ್

ಬೆಂಗಳೂರು: ರೈಲ್ವೇ ನಿಲ್ದಾಣಕ್ಕೆ ಬ್ರಹ್ಮಶ್ರೀ ಅವರ ಹೆಸರಿಡಬೇಕು ಎಂದು ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ ಒತ್ತಾಯಿಸಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿ ಶೂನ್ಯವೇಳೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಮಾಜಿ ಸಚಿವ ಯುಟಿ ಖಾದರ್, ಮಂಗಳೂರು ವಿಮಾನ ನಿಲ್ದಾಣಕ್ಕೆ ಅಂದಿನ ಕಾಲದಲ್ಲಿ ಅಸಮಾನತೆಯ ವಿರುದ್ಧ ಹೋರಾಡಿದ ತುಳುನಾಡಿನ ಕಾರಣಿಕ ಶಕ್ತಿಗಳಾದ ಕೋಟಿ ಚೆನ್ನಯ್ಯ ಅವರ ಹೆಸರಿಡಬೇಕು. ಮಂಗಳೂರು ರೈಲ್ವೇ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಅವರ ಹೆಸರನ್ನಿಡಬೇಕು ಎಂದು ಆಗ್ರಹಿಸಿದರು. ಅಲ್ಲದೇ ಇದೇ ವೇಳೆ ಮಂಗಳೂರು ವಿಶ್ವವಿದ್ಯಾಲಯಕ್ಕೆ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಹೆಸರನ್ನಿಡಬೇಕು ಎಂದು ಯುಟಿ ಖಾದರ್ ಸದನದಲ್ಲಿ ಸರ್ಕಾರವನ್ನು ಒತ್ತಾಯಿಸಿದರು. ಮಂಗಳೂರಿನಲ್ಲಿ ಕಳೆದ ಕೆಲ ಸಮಯದಿಂದ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವ ವಿಚಾರದಲ್ಲಿ ಭಾರೀ ಪರವಿರೋಧ ಚರ್ಚೆಗಳು ನಡೆಯುತ್ತಿದ್ದು, ಬಿಜೆಪಿ ಕಾಂಗ್ರೆಸ್‌ ಮಧ್ಯೆಯೂ ರಾಜಕೀಯ ಕೆಸರೆರಚಾಟಗಳು ನಡೆಯುತ್ತಿವೆ. ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಹೆಸರನ್ನಿಡದಂತೆ ತೆರೆಮರೆಯಲ್ಲಿ ಕೆಲವೊಂದು ಶಕ್ತಿಗಳು ತಂತ್ರ ರೂಪಿಸುತ್ತಿವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗಿತ್ತು. ಇತ್ತೀಚೆಗೆ ಜಿಲ್ಲೆಯ ಬಿಲ್ಲವ ಸಂಘಟನೆಗಳು ಮಂಗಳೂರಿನ ಕುದ್ರೋಳಿ ಸಮೀಪದ ಲೇಡಿಹಿಲ್‌ ಸರ್ಕಲ್‌ಗೆ ನಾರಾಯಣ ಗುರು ಅವರ ಹೆಸರನ್ನಿಡುವಂತೆ ಆಗ್ರಹಿಸಿದ್ದವು. ಅಲ್ಲದೇ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಅವರ ಹೆಸರನ್ನಿಡುವಂತೆ ಆಗ್ರಹಿಸಿದ್ದವು. ಇದಕ್ಕಾಗಿ ಕೆಲವಾರದ ಹಿಂದೆ ಬೈಕ್‌ ಜಾಥಾವನ್ನೂ ನಡೆಸಲಾಗಿತ್ತು. ವಾರದ ಹಿಂದಷ್ಟೇ ವಿಮಾನ ನಿಲ್ದಣಕ್ಕೆ ಹೆಸರನ್ನಿಡುವ ಬಗ್ಗೆ ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಈ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ್ದರು


from India & World News in Kannada | VK Polls https://ift.tt/3j6KyAt

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...