
ಬೆಂಗಳೂರು: ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಚುಕ್ವೂ ಇಮೆಕ್(24), ಆಮ್ಯಸಿಲಮ್ ಚಿರೋಜ್(35) ಬಂಧಿತರಾಗಿದ್ದು, ಆರೋಪಿಗಳು ಇಂದಿರಾ ನಗರದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಸಂಚು ರೂಪಿಸುತ್ತಿದ್ದರು. ಮಾಹಿತಿ ಆಧರಿಸಿದ ಪೊಲೀಸರು ದಾಳಿ ನಡೆಸಿ ಮಾಲು ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಇಬ್ಬರು ಆರೋಪಿಗಳು ನೈಜೀರಿಯಾದಿಂದ ಬಂದು ಥಣಿಸಂದ್ರ ಹಾಗೂ ಕೋಗಿಲೆ ಗ್ರಾಮದಲ್ಲಿ ವಾಸವಿದ್ದರು. ಅಕ್ರಮವಾಗಿ ಹಣ ಸಂಪಾದನೆಗಾಗಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಟೆಕ್ಕಿಗಳಿಗೆ ಡ್ರಗ್ಸ್ ಇನ್ನಿತರ ಮಾದಕ ವಸ್ತು ಮಾರಾಟ ಮಾಡುತ್ತಿದ್ದರು. ಇಬ್ಬರ ಬಳಿಯೂ ಯಾವುದೇ ಪಾಸ್‌ಫೋರ್ಟ್ ಇಲ್ಲ. ಆದರೂ, ಬೆಂಗಳೂರಿನಲ್ಲಿಓಡಾಡಿಕೊಂಡಿದ್ದರು ಎನ್ನಲಾಗಿದೆ. ಇದೀಗ ಆರೋಪಿಗಳನ್ನು ಮಾಲು ಸಮೇತ ಬಂಧಿಸಲಾಗಿದ್ದು, ಅವರ ವಿರುದ್ಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಚಾರಣೆಗೊಳಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
from India & World News in Kannada | VK Polls https://ift.tt/3kmeSHJ