ಮಂಗಳೂರಿನ ಪಾಲಿಕೆ ಅಧಿಕಾರಿ ಕೆ.ವಿ.ಜಯರಾಜ್ ಮನೆ ಮೇಲೆ ಎಸಿಬಿ ದಾಳಿ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಟೌನ್ ‌ಪ್ಲಾನಿಂಗ್ ಜಂಟಿ ನಿರ್ದೇಶಕ ಜಯರಾಜ್ ಕೆ.ವಿ. ಫ್ಲ್ಯಾಟ್ ಗೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. ಕೇರಳ ಸೇರಿ ಮಂಗಳೂರಿನಲ್ಲಿ ಅಪಾರ ಆಸ್ತಿ ಗಳಿಕೆ ಆರೋಪದ ಮೇಲೆ ಜಯರಾಜ್ ಗೆ ಸೇರಿದ ಮಂಗಳೂರು ಕಾಪಿಕಾಡ್ ನಾಲ್ಕನೇ ಕ್ರಾಸ್ ಫ್ಲ್ಯಾಟ್, ಅವರ ತಂದೆಯ ಪಡೀಲ್ ಮನೆಗೆ, ಕೇರಳದಲ್ಲಿರುವ ಜಯರಾಜ್ ಪತ್ನಿ ಕ್ವಾಟ್ರಸ್ ಮೇಲೂ ದಾಳಿ ನಡೆಸಲಾಗಿದೆ‌. ಎಸ್ಪಿ ಬೋಪಯ್ಯ, ಡಿವೈಎಸ್ಪಿ ಕೆ.ಸಿ.ಪ್ರಕಾಶ್‌ ಇನ್ಸ್‌ಪೆಕ್ಟರ್ ಗಳಾದ ಶ್ಯಾಂಸುಂದರ್‌, ಗುರುರಾಜ್‌ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ರಾಜ್ಯದ 7 ಸರಕಾರಿ ಅಧಿಕಾರಿಗಳ ಮನೆ, ಕಚೇರಿಗಳು ಸೇರಿ ರಾಜ್ಯಾದ್ಯಂತ 30 ಕಡೆ ಏಕಕಾಲಕ್ಕೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು ನಗರ, ಬಳ್ಳಾರಿ, ಕೋಲಾರ, ಧಾರವಾಡ, ದಕ್ಷಿಣ ಕನ್ನಡ, ಚಿತ್ರದುರ್ಗ ಹಾಗೂ ಕಲಬುರಗಿಯ ವಿವಿಧೆಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸಹಕಾರ ಸಂಘಗಳ ಜಂಟಿ ನಿಬಂಧಕ ಡಿ.ಪಾಂಡುರಂಗ ಗರಗ್ ಅವರಿಗೆ ಸಂಬಂಧಿಸಿದ ವಿಜಯನಗರದ ಮನೆ, ಜಯನಗರ, ಮಲ್ಲೇಶ್ವರಂ ಕಚೇರಿ ಹಾಗೂ ಚಿತ್ರದುರ್ಗದ ಮನೆ ಸೇರಿ ಐದು ಕಡೆ ರೇಡ್‌ ಆಗಿದೆ.


from India & World News in Kannada | VK Polls https://ift.tt/3amDbRu

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...