ಮಂಗಳೂರು ವಿಮಾನ ನಿಲ್ದಾಣ ಅದಾನಿಗೆ ಹಸ್ತಾಂತರ; ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌..!

ಬೆಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆ, ನಿರ್ವಹಣೆ ಮತ್ತು ಅಭಿವೃದ್ಧಿ ಹೊಣೆಯನ್ನು ಅದಾನಿ ಎಂಟರ್‌ಪ್ರೈಸಸ್‌ ಲಿಮಿಟೆಡ್‌ಗೆ ಗುತ್ತಿಗೆಗೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಕುರಿತು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಪ್ರಾಧಿಕಾರದ ಉದ್ಯೋಗಿಗಳ ಸಂಘ ಸಲ್ಲಿಸಿದ್ದ ಪಿಐಎಲ್‌ ಕುರಿತು ಎ.ಎಸ್‌.ಓಕ್‌ ನೇತೃತ್ವದ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಿತು. ಪ್ರತಿವಾದಿಗಳಾದ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ, ಮಂಗಳೂರು ವಿಮಾನ ನಿಲ್ದಾಣದ ನಿರ್ದೇಶಕ ಮತ್ತು ಅದಾನಿ ಎಂಟರ್‌ಪ್ರೈಸಸ್‌ ಲಿಮಿಟೆಡ್‌ಗೆ ನೋಟಿಸ್‌ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆ ಮುಂದೂಡಿತು. ಅರ್ಜಿದಾರರು, ಸರಕಾರಿ-ಖಾಸಗಿ ಸಹಭಾಗಿತ್ವ ಯೋಜನೆಯಡಿ ಅಹಮದಾಬಾದ್‌, ಜೈಪುರ, ಲಖನೌ, ಗೋವಾ, ಗುವಾಹಟಿ ಮತ್ತು ಮಂಗಳೂರು ವಿಮಾನ ನಿಲ್ದಾಣ ಕಾರ್ಯಾಚರಣೆ, ನಿರ್ವಹಣೆ ಮತ್ತು ಅಭಿವೃದ್ಧಿ ಮಾಡಲು 2018ರ ನ.8ರಂದು ಕೇಂದ್ರ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ಅದು ಕಾನೂನುಬಾಹಿರ ಕ್ರಮ ಮತ್ತು ವಿಮಾಣ ನಿಲ್ದಾಣ ಪ್ರಾಧಿಕಾರ ಕಾಯಿದೆಯ ಉಲ್ಲಂಘನೆ ಎಂದು ದೂರಿದ್ದಾರೆ.


from India & World News in Kannada | VK Polls https://ift.tt/2LfT57t

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...