ಚಿಕ್ಕಬಳ್ಳಾಪುರದ ಗಣಿಯಲ್ಲಿ ಸ್ಫೋಟ: ದುರಂತಕ್ಕೆ ಸುಧಾಕರ್ ನೇರ ಹೊಣೆ! ಕಾಂಗ್ರೆಸ್ ಆರೋಪ

ಬೆಂಗಳೂರು: ಜಿಲ್ಲೆಯ ಗಣಿಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ ಸುಧಾಕರ್‌ ನೇರ ಹೊಣೆ ಎಂದು ಆರೋಪ ಮಾಡಿದೆ.ಸೋಮವಾರ ರಾತ್ರಿ ಜಿಲ್ಲೆಯ ಹಿರೇನಾಗವಲ್ಲಿ ಬಳಿ ಅಕ್ರಮ ಕಲ್ಲು ಕ್ವಾರಿಯಲ್ಲಿ ಜಿಲೆಟಿನ್‌ ಸ್ಪೋಟ ಸಂಭವಿಸಿದೆ. ಈ ಘಟನೆಯಲ್ಲಿ ಈವರೆಗೆ ಐವರು ಮೃತಪಟ್ಟಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಶಿವಮೊಗ್ಗದ ಸ್ಫೋಟದ ನಂತರವೂ ಎಚ್ಚೆತ್ತುಕೊಳ್ಳದ ಸರ್ಕಾರ, ಅಕ್ರಮ ಕಲ್ಲು ಕ್ವಾರಿಗಳಿಗೆ, ಅಕ್ರಮ ಸ್ಫೋಟಕಗಳಿಗೆ ಕಡಿವಾಣ ಹಾಕುವ ಬದಲು ಬೆಂಬಲವಾಗಿದ್ದರ ಪರಿಣಾಮ ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಜಿಲೆಟಿನ್ ಸ್ಫೋಟಸಂಭವಿಸಿದೆ.ಶಿವಮೊಗ್ಗದಂತೆ ಇಲ್ಲೂ ಅಕ್ರಮಗಳ ಹಿಂದೆ ಬಿಜೆಪಿಗರೇ ಇದ್ದಾರೆ ಎಂದು ಆರೋಪಿಸಿದೆ. ಜಿಲ್ಲೆಯ ಹಿರೇನಾಗವಲ್ಲಿ ಬಳಿ ಅಕ್ರಮ ಕಲ್ಲು ಕ್ವಾರಿ ಸ್ಪೋಟ ದುರಂತ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕಾರ್ಮಿಕರ ದೇಹ ಛಿದ್ರ ಛಿದ್ರಗೊಂಡಿದೆ. ಅಲ್ಲದೆ ಟಾಟಾ ಏಸ್ ವಾಹನ ಸಂಪೂರ್ಣ ಛಿದ್ರವಾಗಿದೆ. ಸ್ಪೋಟದಿಂದ ಹತ್ತಾರು ಕಿಲೋಮೀಟರ್ ದೂರದವರೆಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನ ಭೂಕಂಪ ಎಂದು ಭಾವಿಸಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ನಂತರ ಜಿಲೆಟಿನ್ ಸ್ಪೋಟ ಸಂಭವಿಸಿದೆ ಎನ್ನುವ ಮಾಹಿತಿ ಗೊತ್ತಾಗಿದೆ. ಇತ್ತೀಚೆಗೆ ಶಿವಮೊಗ್ಗದಲ್ಲೂ ಇಂತಹದ್ದೇ ಸ್ಫೋಟ ಸಂಭವಿಸಿತ್ತು. ಅಮಾಯಕ ಕಾರ್ಮಿಕರು ಈ ಸ್ಫೋಟದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಚಿಕ್ಕಬಳ್ಳಾಪುರದಲ್ಲೂ ಸ್ಫೋಟ ಸಂಭವಿಸಿದ್ದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.


from India & World News in Kannada | VK Polls https://ift.tt/3dAQBwb

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...