ಸಿಂಧನೂರು: ಪ್ರೇಮಿಗಳ ದಿನಾಚರಣೆಗೂ ಮುನ್ನ ಮಂಡ್ಯದ ಕೆ.ಆರ್ ಪೇಟೆಯಲ್ಲಿ ಮಟಮಟ ಮಧ್ಯಾಹ್ನವೇ ಪ್ರೇಮಿಗಳಿಬ್ಬರು ಕಿಸ್ ಮಾಡಿದ್ದ ವಿಡಿಯೋ ಭಾರೀ ವೈರಲ್ ಆಗಿತ್ತು. ಈ ಘಟನೆ ಬಗ್ಗೆ ಭಾರೀ ಆಕ್ರೋಶ ಕೂಡ ವ್ಯಕ್ತವಾಗಿತ್ತು. ಇದೀಗ ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಪ್ರೇಮಿಗಳಿಬ್ಬರು ಹಾಡಹಗಲೇ ಪರಸ್ಪರ ಮುತ್ತನೀಡುತ್ತಿರುವ ವಿಡಿಯೋ ವೈರಲ್ ಆಗಿದೆ. ಬಸ್ ನಿಲ್ದಾಣದಲ್ಲಿ ಬಳ್ಳಾರಿ ಮಾರ್ಗದ ಬಸ್‌ಗಳು ನಿಲ್ಲುವ ಸ್ಥಳದಲ್ಲಿ ಪ್ರೇಮಿಗಳು ನಿಂತಿದ್ದು, 30 ಸೆಕೆಂಡಿನ ವಿಡಿಯೋದಲ್ಲಿ ಸೆರೆ ಸಿಕ್ಕಿದ್ದಾರೆ. ಹಗಲಲ್ಲಿಯೇ ಚುಂಬಿಸುತ್ತಿರುವ ದೃಶ್ಯಾವಗಳಿಗಳು ವೈರಲ್ ಆಗಿದ್ದು, ಸಾರ್ವಜನಿಕವಾಗಿ ಬೇಸರ ಮೂಡಿಸಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ದಿನವೂ ನೂರಾರು ಸಂಖ್ಯೆಯಲ್ಲಿ ಬಂದು ಹೋಗುವ ನಿಲ್ದಾಣದಲ್ಲಿಇಂತಹ ಮುಜುಗರಕ್ಕೀಡಾಗುವ ಪ್ರಸಂಗ ನಡೆಯುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸಾರಿಗೆ ಘಟಕ ಸಿಬ್ಬಂದಿ ಈ ಬಗ್ಗೆ ಜಾಗೃತಿವಹಿಸಿ, ಎಚ್ಚರಿಕೆ ನೀಡಬೇಕು ಎಂದು ಪ್ರಜ್ಞಾವಂತರು ಆಗ್ರಹಿಸಿದ್ದಾರೆ.
from India & World News in Kannada | VK Polls https://ift.tt/3pMsQnq