ಬೆಂಗಳೂರು: ನಗರದಲ್ಲಿ ನೂರಕ್ಕಿಂತ ಹೆಚ್ಚು ಸಾರ್ವಜನಿಕರು ಸೇರುವ ಕಡೆಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸುವಂತೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅಧಿಸೂಚನೆ ಹೊರಡಿಸಿದ್ದಾರೆ. ಕರ್ನಾಟಕ ಸಾರ್ವಜನಿಕರ ರಕ್ಷಣೆ ಕಾಯಿದೆ- 2017ರ ಅನ್ವಯ ಈ ಅಧಿಸೂಚನೆ ಹೊರಡಿಸಲಾಗಿದೆ. ಅಂಗಡಿಗಳು, ಮಳಿಗೆಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಸೂಪರ್ ಮಾರ್ಕೆಟ್‌ಗಳು, ಬಿಗ್ ಬಜಾರ್‌ಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಈ ಸಂಬಂಧ ಇನ್‌ಸ್ಪೆಕ್ಟರ್‌ಗಳು ತಮ್ಮ ಠಾಣೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸೇರುವ ಸ್ಥಳಗಳ ಪರಿಶೀಲನೆ ನಡೆಸಬೇಕು ಎಂದು ತಿಳಿಸಲಾಗಿದೆ. ಒಂದು ವೇಳೆ ಇದನ್ನು ನಿರ್ಲಕ್ಷಿಸಿ ಅಂಗಡಿ ಮಾಲೀಕರು ಸಿಸಿಟಿವಿ ಅಳವಡಿಸಿಕೊಳ್ಳದಿದ್ದರೆ ಅಂಥವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆಯನ್ನೂ ನೀಡಲಾಗಿದೆ. ಟ್ರಾಫಿಕ್ ಸಿಗ್ನಲ್‍ಗಳಲ್ಲಿ ಇನ್ನು ಮುಂದೆ ಭಿಕ್ಷಾಟನೆ ಮಾಡುವಂತೆ ಇಲ್ಲ. ಸಿಗ್ನಲ್‍ಗಳಲ್ಲಿ ಭಿಕ್ಷೆ ಬೇಡುವುದು ಹಾಗೂ ಹಣ ವಸೂಲಿ ಮಾಡುವುದು ತಡೆಯುವಂತೆ ಈ ಹಿಂದೆ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಟ್ರಾಫಿಕ್ ಪೊಲೀಸರಿಗೆ ಆದೇಶ ಹೊರಡಿಸಿದ್ದರು. ಎಲ್ಲಾ ಡಿಸಿಪಿಗಳು ತಮ್ಮ ವಿಭಾಗಗಳಲ್ಲಿ ಭಿಕ್ಷೆ ಬೇಡುವುದನ್ನು ತಪ್ಪಿಸ ಬೇಕು ಎಂದಿದ್ದರು.
from India & World News in Kannada | VK Polls https://ift.tt/37uYkbx