ಕೋಲಾರ ಜಿಲ್ಲಾ ಆರೋಗ್ಯಾಧಿಕಾರಿ ಮನೆ ಮೇಲೆ ಎಸಿಬಿ ದಾಳಿ

ಕೋಲಾರ: ಬೆಳ್ಳಂ ಬೆಳಗ್ಗೆ ಅಧಿಕಾರಿಗಳು ರಾಜ್ಯದ 30 ಕಡೆ ಏಕಕಾಲಕ್ಕೆ ದಾಳಿ ನಡೆಸಿ, ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ನೀಡಿದ್ದಾರೆ. ಕೋಲಾರದ ಮನೆ ಮೇಲೆ ಕೂಡಾ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಆರೋಗ್ಯಾಧಿಕಾರಿ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಕಚೇರಿಯಲ್ಲೂ ಸಹ ತಪಾಸಣೆ ನಡೆಸಿದ್ದಾರೆ. ಮುಳಬಾಗಲು ಮನೆ, ನರ್ಸಿಂಗ್ ಹೋಂಗಳಲ್ಲಿ ಅಧಿಕಾರಿಗಳಿಂದ ಪರಿಶೀಲನೆ ನಡೆಯುತ್ತಿದ್ದು, ಬೆಂಗಳೂರು, ಚಿಂತಾಮಣಿಗಳಲ್ಲಿ ಡಾ.ವಿಜಯಕುಮಾರ್ ಆಸ್ತಿ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಹಲವು ವರ್ಷಗಳಿಂದಲೂ ಠಿಕಾಣಿ ಹೂಡಿದ್ದ ಡಾ.ವಿಜಯಕುಮಾರ್ , ಅನೇಕ ಹಗರಣದಲ್ಲಿ ಭಾಗಿಯಾಗಿರುವ ಆರೋಪವಿದೆ. ಡಾ.ವಿಜಯಕುಮಾರ್ ಮೇಲೆ ಅಪಾರ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಆರೋಪವಿದ್ದು, ಕೋಲಾರ ಎಸಿಬಿ ಡಿವೈಎಸ್ಪಿ ಪುರುಷೋತ್ತಮ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ರಾಜ್ಯದ 7 ಸರಕಾರಿ ಅಧಿಕಾರಿಗಳ ಮನೆ, ಕಚೇರಿಗಳು ಸೇರಿ ರಾಜ್ಯಾದ್ಯಂತ 30 ಕಡೆ ಏಕಕಾಲಕ್ಕೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು ನಗರ, ಬಳ್ಳಾರಿ, ಕೋಲಾರ, ಧಾರವಾಡ, ದಕ್ಷಿಣ ಕನ್ನಡ, ಚಿತ್ರದುರ್ಗ ಹಾಗೂ ಕಲಬುರಗಿಯ ವಿವಿಧೆಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.


from India & World News in Kannada | VK Polls https://ift.tt/3apK44n

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...