ಬೆಂಗಳೂರು: ಮೂರು ವಿಧಾನಸಭಾ ಕ್ಷೇತ್ರಗಳು ಹಾಗೂ ಒಂದು ಲೋಕಸಭಾ ಕ್ಷೇತ್ರದ ಶೀರ್ಘ್ರದಲ್ಲೇ ಘೋಷಣೆ ಆಗುವ ಸಾಧ್ಯತೆ ಇರುವುದರಿಂದ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಈಗಾಗಲೇ ಪ್ರಾಥಮಿಕ ಹಂತದ ತಯಾರಿಗಳನ್ನು ಆರಂಭಿಸಿವೆ. , ಮಸ್ಕಿ, ಸಿಂದಗಿ ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಈ ಹಿನ್ನೆಲೆಯಲ್ಲಿ ಕುತೂಹಲ ಕೆರಳಿಸಿದೆ. ಕಾಂಗ್ರೆಸ್ ಶಾಸಕ ನಾರಾಯಣ ರಾವ್ ನಿಧನದಿಂದಾಗಿ ಈ ಸ್ಥಾನ ತೆರವಾಗಿದೆ. ಇನ್ನು ಮಸ್ಕಿ ಶಾಸಕರಾಗಿದ್ದ ಪ್ರತಾಪಗೌಡ ಪಾಟೀಲ ಕಾಂಗ್ರೆಸ್ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅದೇ ರೀತಿ ಸಿಂದಗಿ ಜೆಡಿಎಸ್ ಶಾಸಕ ಎಂ.ಸಿ ಮನಗೊಳಿ ಅವರ ನಿಧನದಿಂದಾಗಿ ಈ ಸ್ಥಾನವೂ ತೆರವಾಗಿದೆ. ಈ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಶೀಘ್ರದಲ್ಲೇ ಉಪಚುನಾವಣೆ ಘೋಷಣೆ ಆಗುವ ಸಾಧ್ಯತೆ ಇದೆ. ಅದರ ಜೊತೆಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದ ಸುರೇಶ್ ಅಂಗಡಿ ಕೋವಿಡ್ ನಿಂದಾಗಿ ಮೃತಪಟ್ಟಿದ್ದು ಅವರ ಸ್ಥಾನವೂ ತೆರವಾಗಿದೆ. ಈ ಕ್ಷೇತ್ರಕ್ಕೂ ಉಪಚುನಾವಣೆ ನಡೆಯಲಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಆರಂಭಿಕ ಹಂತದ ತಯಾರಿಯಲ್ಲಿ ತೊಡಗಿಕೊಂಡಿವೆ. ಬಿಜೆಪಿ ಈಗಾಗಲೇ ಚುನಾವಣಾ ಉಸ್ತುವಾರಿಗನ್ನು ಘೋಷಣೆ ಮಾಡಿದೆ. ಮೂರು ಕ್ಷೇತ್ರಗಳಿಗೆ ಉಸ್ತುವಾರಿಗಳನ್ನು ನೇಮಕ ಮಾಡಿದ್ದು ಬಸವ ಕಲ್ಯಾಣದ ಉಸ್ತುವಾರಿಯನ್ನು ಡಿಸಿಎಂ ಲಕ್ಷ್ಮಣ ಸವದಿ, ವಿ ಸೋಮಣ್ಣ, ಸಚಿವ ಬಸವರಾಜ ಬೊಮ್ಮಾಯಿ, ಭಗವಂತ ಖೂಬಾ, ಮಾಲಿಕಯ್ಯ ಗುತ್ತೇದಾರ್, ರಾಜ್ಯ ಉಪಾಧ್ಯಕ್ಷ ರಾಜಕುಮಾರ್ ಪಾಟೀಲ್ ತೇಲ್ಕರ್, ಶಾಸಕ, ವಿಭಾಗ ಪ್ರಭಾರಿ ಈಶ್ವರ್ ಸಿಂಗ್ ಠಾಕೂರ್, ಅಮರನಾಥ್ ಪಾಟೀಲ್ ಅವರಿಗೆ ನೀಡಿದೆ. ಅದೇ ರೀತಿ ಮಸ್ಕಿ ಕ್ಷೇತ್ರದ ಉಸ್ತುವಾರಿಯನ್ನು ಸಚಿವ ಶ್ರೀರಾಮುಲು, ಎನ್ ರವಿ ಕುಮಾರ್, ಬಿ. ವೈ ವಿಜಯೇಂದ್ರ, ನೇಮಿರಾಜ್ ನಾಯಕ್, ವಿಭಾಗ ಸಹ ಪ್ರಭಾರಿ ನರಸಿಂಹ ನಾಯಕ್ (ರಾಜೂ ಗೌಡ), ಶಾಸಕ ಶಿವರಾಜ್ ಪಾಟೀಲ್ ಅವರಿಗೆ ನೀಡಿದೆ. ಇನ್ನು ಕಾಂಗ್ರೆಸ್ ಕೂಡಾ ಚುನಾವಣಾ ತಯಾರಿಗಳನ್ನು ಈಗಾಗಲೇ ಆರಂಭಿಸಿದೆ. ತಮ್ಮ ಹಿಡಿತದಲ್ಲಿದ್ದ ಬಸವಕಲ್ಯಾಣ ಹಾಗೂ ಮಸ್ಕಿಯನ್ನು ಮರಳಿ ಪಡೆಯಲು ಕಸರತ್ತು ನಡೆಸುತ್ತಿದೆ. ಈಗಾಗಲೇ ಸಭೆಗಳನ್ನು ನಡೆಸಲಾಗಿದ್ದು ಚುನಾವಣೆ ಘೋಷಣೆಗೊಂಡ ಬೆನ್ನಲ್ಲೇ ಅಭ್ಯರ್ಥಿ ಆಯ್ಕೆ ಅಂತಿಮಗೊಳ್ಳಲಿದೆ. ಜೆಡಿಎಸ್ನಿಂದ ಅಧಿಕೃತ ಚುನಾವಣಾ ತಯಾರಿಗಳು ಆರಂಭಗೊಳ್ಳದಿದ್ದರೂ ಅಭ್ಯರ್ಥಿಯ ಆಯ್ಕೆ ಹಾಗೂ ತಯಾರಿಗಳು ನಡೆಯುತ್ತಿವೆ. ಒಟ್ಟಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಉಪಚುನಾವಣೆಗಳನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದೆ.
from India & World News in Kannada | VK Polls https://ift.tt/37NtOcO