ಮಾನಸಿಕ ಖಿನ್ನತೆ, ಬಾಗಲಕೋಟೆಯಲ್ಲಿ ಮೆಡಿಕಲ್ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ!

ಬಾಗಲಕೋಟೆ: ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳು ಬಿಗಿದು ಸಾವಿಗೆ ಶರಣಾದ ಘಟನೆ ಬಾಗಲಕೋಟೆಯಲ್ಲಿ ಫೆ.21ರಂದು ನಡೆದಿದೆ. ಸಿಂಧುರೇಖಾ ಸಿ.ಎಸ್ (25) ಮಾಡಿಕೊಂಡ ವಿದ್ಯಾರ್ಥಿನಿ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಈಕೆ ನೇಣು ಬಿಗಿದು ಕೊನೆಯುಸಿರೆಳೆದಿದ್ದಾಳೆ. ನವನಗರದ ಕುಮಾರೇಶ್ವರ ಮೆಡಿಕಲ್ ಕಾಲೇಜ್ ಆವರಣದಲ್ಲಿರುವ ಬಾಡಗಿ ಮನೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಕುಮಾರೇಶ್ವರ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದಲ್ಲಿ ಸಿಂಧುರೇಖಾ ಸಿ.ಎಸ್ ಎಂಬಿಬಿಎಸ್ ಓದುತ್ತಿದ್ದಳು. ಬಾಡಿಗೆ ಮನೆಯಲ್ಲಿ ಪೋಷಕರೊಂದಿಗೆ ವಾಸವಾಗಿದ್ದ ಈಕೆ, ಪೋಷಕರು ಫೆ.20ರ ರಾತ್ರಿ ಬೆಂಗಳೂರಿಗೆ ತೆರಳಿದ್ದ ವೇಳೆ ಈಕೆ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


from India & World News in Kannada | VK Polls https://ift.tt/2NjNPku

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...