ಕೋವಿಡ್‌ ಆತಂಕ: ಸದ್ಯಕ್ಕಿಲ್ಲ ಲಾಕ್‌ಡೌನ್, ಕರ್ಪ್ಯೂ, ಸುಧಾಕರ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ಸದ್ಯಕ್ಕೆ ಕರ್ಪ್ಯೂ ಲಾಕ್‌ಡೌನ್ ನಂತಹ ಯಾವುದೇ ನಿರ್ಧಾರ ಕೈಗೊಳ್ಳುವ ಚಿಂತನೆ ಸರ್ಕಾರದ ಮುಂದೆ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಜನರು ಕಡ್ಡಾಯ ಆಗಿ ಪಾಲನೆ ಮಾಡಬೇಕು, ಆದರೆ ಲಾಕ್‌ಡೌನ್ ಪರಿಸ್ಥಿತಿ ಬಾರದಿರಲಿ ಎಂದರು. ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ಪ್ರತಿಯೊಬ್ಬರ ತಪಾಸಣೆ ವರದಿ ಪಡೆದುಕೊಳ್ಳುವುದು ಅಷ್ಟು ಸುಲಭದ ಮಾತಲ್ಲ. ಆದರೂ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ತಿಳಿಸಿದರು. ಮಾರ್ಚ್‌ ಅಂತ್ಯದ ವರೆಗೂ ಎಚ್ಚರ ಅಗತ್ಯವಾಗಿದೆ.ಈ ಅವಧಿ ಸಾಕಷ್ಟು ಮಹತ್ವದ ಅವಧಿಯಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಿದೆ. ಜನರೂ ಇದನ್ನು ಪಾಲನೆ ಮಾಡಬೇಕು ಹಾಗೂ ಜವಾಬ್ದಾರಿಯಿಂದ ವರ್ತನೆ ಮಾಡಬೇಕು ಎಂದು ತಿಳಿಸಿದರು. ಸಭೆ ಸಮಾರಂಭಗಳಿಗೆ ಕೆಲವೊಂದು ನಿರ್ಬಂಧ ಇದ್ದರೂ ಅದು ಪಾಲನೆ ಆಗುತ್ತಿಲ್ಲ. ಮದುವೆ ಕಾರ್ಯಕ್ರಮದಲ್ಲೂ ಜನರು ಎಗ್ಗಿಲ್ಲದೆ ಸೇರುತ್ತಿದ್ದಾರೆ. ಇದೆಲ್ಲಾ ನಿಯಂತ್ರಣ ಮಾಡುವುದು ಅಗತ್ಯವಾಗಿದೆ ಎಂದು ತಿಳಿಸಿದರು.


from India & World News in Kannada | VK Polls https://ift.tt/3dw6y76

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...