ಕೊರೊನಾತಂಕ..! ಬೆಳಗಾವಿ ಜಿಲ್ಲೆಗೆ ಹೊಂದಿಕೊಂಡಿರುವ ಮಹಾರಾ‍ಷ್ಟ್ರ ಗಡಿಯಲ್ಲಿ ಕಟ್ಟೆಚ್ಚರ..!

ಬೆಳಗಾವಿ: ಮಹಾರಾಷ್ಟ್ರದಲ್ಲಿ ರೂಪಾಂತರಿ ಪಾಸಿಟಿವ್‌ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಗೆ ಹೊಂದಿಕೊಂಡಿರುವ ಗಡಿಯಲ್ಲಿನ ಚೆಕ್‌ಪೋಸ್ಟ್‌ಗಳಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್‌ ತಪಾಸಣೆಯ ಕೊರೊನಾ ನೆಗೆಟಿವ್‌ ವರದಿ ಕಡ್ಡಾಯ ಮಾಡಲಾಗಿದೆ. ಅದರಂತೆ ಜಿಲ್ಲೆಯ ಗಡಿಯಲ್ಲಿರುವ ಎಲ್ಲಾ ಚೆಕ್‌ಪೋಸ್ಟ್‌ಗಳಲ್ಲಿ ಪ್ರಯಾಣಿಕರ ಕೊರೊನಾ ನೆಗೆಟಿವ್‌ ವರದಿ ಪರಿಶೀಲಿಸಲಾಗುತ್ತಿದೆ. ಕೊರೊನಾ ನೆಗೆಟಿವ್‌ ವರದಿ ಇಲ್ಲದೆ ಇದ್ದರೆ ಕರ್ನಾಟಕಕ್ಕೆ ಪ್ರವೇಶ ಇಲ್ಲ ಎಂದು ಚೆಕ್‌ಪೋಸ್ಟ್‌ಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ಸರಕಾರದ ಮಾರ್ಗ ಸೂಚಿ ಪ್ರಕಾರ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಬೆಳಗಾವಿ ಜಿಲ್ಲೆಗೆ ಪ್ರಮುಖವಾಗಿ ಕೊಗನಳ್ಳಿ ಚೆಕ್‌ಪೋಸ್ಟ್‌, ಕಾಗವಾಡ- ಮಿರಜ್‌, ಸದಲಗಾ ಇಚಲಕರಂಜಿ, ಅಥಣಿ-ಜತ್‌ ಮಾರ್ಗದ ಮೂಲಕ ಮಹಾರಾಷ್ಟ್ರದ ಪ್ರಯಾಣಿಕರು ಬರುತ್ತಾರೆ. ಇವುಗಳ ಹೊರತಾಗಿಯೂ ಸಣ್ಣಪುಟ್ಟ ರಸ್ತೆಗಳು ಇವೆ. ಆದರೆ, ಈ ನಾಲ್ಕು ರಸ್ತೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮಹಾರಾಷ್ಟ್ರದ ಭಕ್ತರು ಹೆಚ್ಚಾಗಿ ಬರುವ ಸವದತ್ತಿ ಯಲ್ಲಮ್ಮ ಸೇರಿ ಪ್ರಮುಖ ಮೂರು ದೇವಸ್ಥಾನಗಳಿಗೆ ಸಾರ್ವಜನಿಕ ಪ್ರವೇಶವನ್ನು ಈಗಾಗಲೇ ನಿರ್ಬಂಧಿಸಲಾಗಿದೆ. ಜತೆಗೆ ಆಸ್ಪತ್ರೆ ಗಳಲ್ಲಿಯೂ ಕೊರೊನಾ ಎರಡನೇ ಅಲೆ ಎದುರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.


from India & World News in Kannada | VK Polls https://ift.tt/2ZGJQ3U

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...