ಸುಳ್ಳು ಮಾಹಿತಿ ನೀಡಿ ಬಿಪಿಎಲ್‌ ಕಾರ್ಡ್‌ ಪಡೆದವರ ವಿರುದ್ಧ ಕಾನೂನು ಕ್ರಮ: ಸುಳ್ಯ ತಹಶೀಲ್ದಾರ್‌

ಸುಳ್ಯ: ಸುಳ್ಳು ಮಾಹಿತಿ ನೀಡಿ ಬಿಪಿಎಲ್‌ ಪಡಿತರ ಚೀಟಿಯನ್ನು ಪಡೆದುಕೊಂಡಿರುವವರು ತಮ್ಮ ಪಡಿತರ ಚೀಟಿಯನ್ನು ಇಲಾಖೆಗೆ ಹಿಂದಿರುಗಿಸಬೇಕು. ಇಲ್ಲದಿದ್ದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸುಳ್ಯ ತಹಸೀಲ್ದಾರ್‌ ಅನಿತಾ ಲಕ್ಷ್ಮಿ ತಿಳಿಸಿದ್ದಾರೆ. ಅನರ್ಹ ಬಿಪಿಎಲ್‌ ಪಡಿತರ ಚೀಟಿದಾರರು (ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ಮೇಲ್ಪಟ್ಟವರು, ನಾಲ್ಕು ಚಕ್ರದ ವಾಹನ ಸ್ವಂತಕ್ಕಾಗಿ ಬಳಸುವವರು, ಸರಕಾರಿ/ ಅರೆ ಸರಕಾರಿ/ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಹೊಂದಿರುವವರು, ನಗರ ಪ್ರದೇಶದಲ್ಲಿ1000 ಚದರ ಅಡಿ ವಿಸ್ತೀರ್ಣ ಅಥವಾ ಹೆಚ್ಚಿನ ವಿಸ್ತೀರ್ಣದ ವಾಸದ ಮನೆ ಹೊಂದಿರುವ ಕುಟುಂಬಗಳು) ಕೂಡಲೇ ತಮ್ಮ ಬಿಪಿಎಲ್‌/ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗಳನ್ನು ಆಹಾರ ಇಲಾಖೆಗೆ ಹಾಜರುಪಡಿಸಬೇಕು. ನಿಧನರಾದ ಸದಸ್ಯರ ಹೆಸರನ್ನು ಸಹ ಚೀಟಿಯಿಂದ ಕೂಡಲೇ ತೆಗೆಸಿ ದಾಖಲೆಯನ್ನು ಇಲಾಖೆಗೆ ಹಾಜರುಪಡಿಸಲು ಮಾ.15ರವರೆಗೆ ಕೊನೆಯ ಅವಕಾಶ ನೀಡಲಾಗಿದೆ ಎಂದು ತಹಸೀಲ್ದಾರ್‌ ತಿಳಿಸಿದ್ದಾರೆ.


from India & World News in Kannada | VK Polls https://ift.tt/3b2FM4i

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...