ಬೆಂಗಳೂರು: ತಾನು ವ್ಯಾಸಂಗ ಮಾಡುತ್ತಿದ್ದ ಕಾಲೇಜಿನ ಉಪನ್ಯಾಸಕಿಯ ಪುತ್ರ ತನ್ನನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ್ದಾನೆ ಎಂದು ಸಂತ್ರಸ್ತೆ ವಿದ್ಯಾರಣಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನನ್ವಯ ವಿಜಯನಗರದ ಚಂದನ್(26) ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಹಾಗೂ ಚಂದನ್ ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಯುವತಿ ಮದುವೆ ಮಾಡಿಕೊಳ್ಳುವಂತೆ ಒತ್ತಾಯಿಸಿದಾಗ ಆತ ಮದುವೆಯಾಗಲು ನಿರಾಕರಿಸಿದ್ದ. ಇದರಿಂದ ಮನನೊಂದ ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರಿದಳು. ನಗರದ ಪ್ರತಿಷ್ಠಿತ ಕಾಲೇಜಿನ ಉಪನ್ಯಾಸಕಿ ಪುತ್ರ ಚಂದನ್ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ. ಯುವತಿಯು ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಮೂರು ವರ್ಷಗಳ ಹಿಂದೆ ಶೇಷಾದ್ರಿಪುರಂನಲ್ಲಿ ಇಬ್ಬರ ಪರಿಚಯವಾಗಿ, ಇದು ಸ್ನೇಹಕ್ಕೆ ತಿರುಗಿತ್ತು. ಯುವತಿಯ ಜತೆ ಹೆಚ್ಚು ಸಲುಗೆಯಿಂದ ಇದ್ದ ಚಂದನ್ ಆಕೆಯನ್ನು ಪ್ರೀತಿಸುವುದಾಗಿ ಹೇಳಿದ್ದ. ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಬಲವಂತವಾಗಿ ಹಲವು ಬಾರಿ ಲೈಂಗಿಕ ಸಂಪರ್ಕ ಬೆಳೆಸಿದ್ದ. ಮದುವೆಗೆಂದು ಸಂತ್ರಸ್ತೆಯಿಂದಲೇ ಲಕ್ಷಾಂತರ ಹಣ ಪಡೆದು, ಕೊನೆಗೆ ಮದುವೆ ಆಗುವುದಿಲ್ಲ ಎಂದು ನಿರಾಕರಿಸಿದ್ದ. ಇದರಿಂದ ಮನನೊಂದು ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ಸಂಬಂಧ ಆರೋಪಿ ಚಂದನ್‌ನನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
from India & World News in Kannada | VK Polls https://ift.tt/3trgjZK