ಆಸ್ತಿ ದುರುಪಯೋಗ ಆರೋಪ; ಚಿತ್ರದುರ್ಗದ ಮುರಘಾ ರಾಜೇಂದ್ರ ಶರಣರಿಗೆ ಹೈಕೋರ್ಟ್‌ ನೋಟಿಸ್‌..!

ಬೆಂಗಳೂರು: ಚಿತ್ರದುರ್ಗದ ಆಸ್ತಿ ದುರ್ಬಳಕೆ ಸಂಬಂಧಿಸಿದ ದಾವೆಯಲ್ಲಿ ಮಧ್ಯಂತರ ಅರ್ಜಿಯನ್ನೂ ಪರಿಗಣಿಸುವಂತೆ ನಿರ್ದೇಶನ ಕೋರಿ ಮಠದ ಭಕ್ತರೊಬ್ಬರು ಸಲ್ಲಿಸಿರುವ ಅರ್ಜಿ ಸಂಬಂಧ ಮುರುಘ ರಾಜೇಂದ್ರ ಶರಣರಿಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಮರುಘಾ ಶರಣರನ್ನು ಮಠಾಧಿಪತಿ ಹುದ್ದೆಯಲ್ಲಿ ಮುಂದುವರಿಯದಂತೆ ನಿರ್ಬಂಧಿಸಲು ಕೋರಿ ಸಲ್ಲಿಸಿರುವ ಮೂಲ ದಾವೆಯಲ್ಲಿ ತಮ್ಮ ಮಧ್ಯಂತರ ಅರ್ಜಿಯನ್ನು ಪರಿಗಣಿಸದ ಬೆಂಗಳೂರಿನ 56ನೇ ಸಿಸಿಎಚ್‌ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮಠದ ಭಕ್ತರೂ ಆಗಿರುವ ವಿಜಯಪುರ ಜಿಲ್ಲೆಯ ವಿಜಯಕುಮಾರ್‌ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ವಿಚಾರಣೆ ನಡೆಸಿರುವ ನ್ಯಾ.ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ಪೀಠ ಮಠಾಧಿಪತಿ ಮುರುಘಾ ಶರಣರೂ ಸೇರಿದಂತೆ ಎಲ್ಲ ಏಳು ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ. ಪ್ರಕರಣದ ಹಿನ್ನೆಲೆ ಏನು?: ಶರಣರು ಬೃಹನ್‌ ಮಠದ ಆಸ್ತಿ ಹಾಗೂ ಭಕ್ತರ ಹಣಧಿವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಆರೋಪ ಮಾಡಿದ್ದ ಮಲ್ಲಿಕಾರ್ಜುನ ಸ್ವಾಮಿ ಹಿರೇಮಠ, ವಿಶ್ವನಾಥ ಹಿರೇಮಠ, ರುದ್ರೇಶ್‌ ಅವರು ಮುರುಘಾ ಶರಣರನ್ನು ಮಠಾಧಿಪತಿ ಸ್ಥಾನದಲ್ಲಿ ಮುಂದುವರಿಯದಂತೆ ನಿರ್ಬಂಧಿಸಲು ಕೋರಿ ಬೆಂಗಳೂರಿನ 56ನೇ ಸಿಸಿಎಚ್‌ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. 5ನೇ ಪ್ರತಿವಾದಿಯಾಗಿ ಪರಿಗಣಿಸುವಂತೆ ಕೋರಿ ವಿಜಯ್‌ ಕುಮಾರ್‌ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.


from India & World News in Kannada | VK Polls https://ift.tt/3si1xTI

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...