ಖತರ್ನಾಕ್‌ ಕಳ್ಳನನ್ನು ಬಂಧಿಸಿದ ಬೆಂಗಳೂರು ಪೊಲೀಸರು; ₹13 ಲಕ್ಷ ಮೌಲ್ಯದ 271 ಗ್ರಾಂ ಚಿನ್ನ ವಶ!

ಬೆಂಗಳೂರು: ಮನೆಕಳವು ಮಾಡುತ್ತಿದ್ದವನನ್ನು ಬಂಧಿಸಿರುವ ತಿಲಕ್‌ನಗರ ಠಾಣೆ ಪೊಲೀಸರು, ಆತನಿಂದ 13 ಲಕ್ಷ ರೂ. ಮೌಲ್ಯದ 271 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರಿನ ಗಾಂಧಿನಗರದ ಸೈಯದ್‌ ರಿಯಾಜ್‌ (46) ಬಂಧಿತ. ಆರೋಪಿಯಿಂದ 271 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಠಾಣೆ ಪೊಲೀಸರು ತಿಳಿಸಿದರು. ಇತ್ತೀಚೆಗೆ ತಿಲಕ್‌ನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಬಿಎಚ್‌ಇಎಲ್‌ ಲೇಔಟ್‌ನ ಮೊಹಮ್ಮದ್‌ ರಫೀಕ್‌ ಎಂಬುವರ ಮನೆಯಲ್ಲಿ ನಾಲ್ಕು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿತ್ತು. ಈ ಬಗ್ಗೆ ಮಾಲೀಕರು ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ಕಾರ್ಯಾಚರಣೆಗಿಳಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಸೈಯದ್‌ ರಿಯಾಜ್‌ ವಿರುದ್ಧ ಸಿಟಿ ಮಾರುಕಟ್ಟೆ, ತಿಲಕ್‌ನಗರ, ಜಗಜೀವನರಾಮನಗರ ಪೊಲೀಸ್‌ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತಲ್ಲದೆ ನ್ಯಾಯಾಂಗ ಬಂಧನಕ್ಕೂ ಒಳಗಾಗಿದ್ದ. ಹೊರ ಬಂದ ಬಳಿಕ ಆತ ತನ್ನ ಹಳೇ ಚಾಳಿ ಮುಂದುವರಿಸಿದ್ದ. ಇದೀಗ ತಿಲಕ್‌ನಗರ ಪೊಲೀಸ್‌ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.


from India & World News in Kannada | VK Polls https://ift.tt/2QGxs2H

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...