: ಮೈಸೂರು ರಸ್ತೆಯಿಂದ ಕೆಂಗೇರಿ ವಿಸ್ತೃತ ಮಾರ್ಗದಲ್ಲಿ ಸಿಗ್ನಲಿಂಗ್ ಕಾಮಗಾರಿ ಕಾರಣದಿಂದ ಎಂಟು ದಿನಗಳವರೆಗೆ (ಮಾ. 21 ರಿಂದ ಮಾ. 28) ಸ್ಥಗಿತಗೊಳಿಸಲಾಗಿದ್ದ ಮೆಜೆಸ್ಟಿಕ್ - ನಾಯಂಡಹಳ್ಳಿ ಮಾರ್ಗದ ರೈಲು ಸೇವೆಯನ್ನು ಮಾರ್ಚ್ 26ಕ್ಕೆ ಆರಂಭಿಸುವುದಾಗಿ ಬಿಎಂಆರ್‌ಸಿಎಲ್ ತಿಳಿಸಿದೆ. ನಿಗದಿತ ಅವಧಿಗಿಂತ ಮೊದಲೇ ಕಾಮಗಾರಿ ಪೂರ್ಣಗೊಳ್ಳುವುದರಿಂದ ಮಾ. 29ರ ಬದಲು ಮಾ. 26ರ ಬೆಳಿಗ್ಗೆ 7 ಗಂಟೆಯಿಂದಲೇ ಮೆಟ್ರೊ ಸೇವೆ ಆರಂಭಿಸುವುದಾಗಿ ತಿಳಿಸಿದೆ. ಮೈಸೂರು ರಸ್ತೆ-ಕೆಂಗೇರಿ ವಿಸ್ತೃತ ಮಾರ್ಗದಲ್ಲಿ ಸಿಗ್ನಲಿಂಗ್ ಕಾಮಗಾರಿ ನಡೆಯುತ್ತಿರುವ ಕಾರಣ ಮಾ. 21ರಿಂದ 28ರವರೆಗೆ ಮೆಟ್ರೊ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿತ್ತು. ಕಾಮಗಾರಿ ಪೂರ್ಣಗೊಳಿಸಲು ಒಂದು ವಾರಗಳ ಕಾಲ ಮೆಜೆಸ್ಟಿಕ್, ನಾಯಂಡಹಳ್ಳಿ ನಡುವೆ ನಮ್ಮ ಮೆಟ್ರೊ ಸಂಚಾರವಿಲ್ಲ. ಮಾರ್ಚ್ 29ರ ಬೆಳಿಗ್ಗೆ 7 ಗಂಟೆಗೆ ಮೆಟ್ರೊ ಸೇವೆಯನ್ನು ಪುನರಾರಂಭಿಸುವುದಾಗಿ ಬಿಎಂಆರ್‌ಸಿಎಲ್ ಪ್ರಕಟಣೆ ಹೊರಡಿಸಿದ್ದರೂ, ಇದೀಗ ಅವಧಿಗಿಂತ ಮೊದಲೇ ಕಾಮಗಾರಿ ಪೂರ್ಣಗೊಂಡಿರುವುರಿಂದ ನಾಳೆಯಿಂದ ಪುನರಾರಂಭಗೊಳ್ಳಲಿದೆ.
from India & World News in Kannada | VK Polls https://ift.tt/3sp94AG