2.74 ​ಕೋಟಿಯ 207 ಐಫೋನ್‌ಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ದಂಪತಿ ಬೆಂಗಳೂರಿನಲ್ಲಿ ಅರೆಸ್ಟ್

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 207 ಐಫೋನ್‌ಗಳನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಹೈದರಾಬಾದ್‌ಗೆ ರಸ್ತೆ ಮೂಲಕ ಸಾಗಿಸಲು ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದ ಕಾರನ್ನು ಗುಪ್ತಚರ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ವಿಮಾನ ನಿಲ್ದಾಣದ ಮೂಲಗಳಿಂದ ತಿಳಿದುಬಂದಿದೆ. ಪ್ಯಾರಿಸ್‌ನಿಂದ ಏರ್‌ ಫ್ರಾನ್ಸ್‌ ವಿಮಾನದ(ಎಎಫ್‌ 194) ಮೂಲಕ ಮುಂಜಾನೆ 3.30ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ್ದ ದಂಪತಿಯನ್ನು ಐಫೋನ್‌ಗಳ ಸಮೇತ ಬಂಧಿಸಿರುವ ಅಧಿಕಾರಿಗಳು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾರ್ಚ್ 12ರವರೆಗೆ ದಂಪತಿಯನ್ನು ನ್ಯಾಯಾಂಗ ಬಂಧನದಲ್ಲಿಡಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಇದುವರೆಗೂ ಜಪ್ತಿ ಮಾಡಿದ ಅತಿದೊಡ್ಡ ಮೊಬೈಲ್‌ ಜಪ್ತಿ ಪ್ರಕರಣ ಇದಾಗಿದೆ. ಇದರಲ್ಲಿ, ಐಫೋನ್‌ 12 ಪ್ರೊ ಮತ್ತು ಪ್ರೊ ಮ್ಯಾಕ್ಸ್‌ ಮಾದರಿಗಳಾಗಿದ್ದವು. ಅವುಗಳ ಒಟ್ಟು ಮೌಲ್ಯ 2.74 ಕೋಟಿ ರೂ.ಗಳಾಗಿದ್ದು, ಇವುಗಳ ಖರೀದಿಗಾಗಿ ಬಳಸಿದ ಒಟ್ಟು 37 ಡೆಬಿಟ್‌ ಮತ್ತು ಕ್ರೆಡಿಟ್‌ ಕಾರ್ಡ್‌ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ದಂಪತಿ ಫೆ.13ರಂದು ಮುಂಬಯಿಯಿಂದ ಯುಎಸ್‌ಗೆ ತೆರಳಿದ್ದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


from India & World News in Kannada | VK Polls https://ift.tt/3b71MeD

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...