ಚಾಮರಾಜನಗರ: ಕೊರೊನಾ 2ನೇ ಅಲೆ ಹಿನ್ನೆಲೆ, ಗಡಿ ಭಾಗದಲ್ಲಿ ಸಚಿವರಿಂದ ವೀಕ್ಷಣೆ!

ಚಾಮರಾಜನಗರ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಅಂತರರಾಜ್ಯ ಗಡಿ ಭಾಗಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ. ಈ ವೇಳೆ ಗಡಿಭಾಗಗಳಿಂದ ಬರುವ ವಾಹನಗಳನ್ನ ಖುದ್ದು ಸಚಿವರೇ ತಪಾಸಣೆ ನಡೆಸಿ ಅಗತ್ಯಕ್ರಮಗಳ ಬಗ್ಗೆ ಎಚ್ಚರ ವಹಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ನಮಗೆ ಹೊರರಾಜ್ಯದಿಂದ ಬರುವ ಪ್ರಯಾಣಿಕರಿಗೆ ಮಾಸ್ಕ್ ಧರಿಸಿಲ್ಲ ಅಥವಾ ನಿಯಮ ಪಾಲನೆ ಮಾಡುತ್ತಿಲ್ಲ ಎಂದು ದಂಡ ಹಾಕುವ ಉದ್ದೇಶವಿಲ್ಲ ಬದಲಾಗಿ ಮಾಸ್ಕ್ ಹಾಕಿಸುವ ಉದ್ದೇಶ ನಮ್ಮದಾಗಿದೆ ಎಂದರು. ಈ ಹಿನ್ನೆಲೆ ಜನರಿಗೆ ಕೊರೊನ ತಡೆಗಟ್ಟುವ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದೇವೆ, ಅಂತರರಾಜ್ಯ ಗಡಿಭಾಗದ ಚೆಕ್ ಪೋಸ್ಟ್ ನಲ್ಲಿ ಪ್ರಯಾಣಿಕರಿಗೆ ತೊಂದರೆಯಾಗದಂತೆ ಬಿಗಿ ಕ್ರಮ ತೆಗೆದುಕೊಳ್ಳುತ್ತಿದ್ದೇವೆ, ಆರ್.ಟಿ.ಪಿ.ಸಿ.ಆರ್ ಪತ್ರ ತರಲು ಹೇಳುತ್ತಿದ್ದೇವೆ ಎಂದರು. ಈಗಾಗಲೇ ಚಾಮರಾಜನಗರ ಜಿಲ್ಲಾಧಿಕಾರಿಗಳು ಪಕ್ಕದ ರಾಜ್ಯದ ಜಿಲ್ಲೆಯ ಜಿಲ್ಲಾಧಿಕಾರಿಗಳನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅವರಿಂದ ನಾವು ಏನನ್ನು ಅಪೇಕ್ಷಿಸುತ್ತಿದ್ದೇವೆ ಎಂಬುದನ್ನು ವಿವರಿಸಿದ್ದೇವೆ, ಈ ಹಿನ್ನೆಲೆ ಹೊರಗಿನಿಂದ ಬರುವವರಿಗೆ ಆರ್.ಟಿ.ಪಿ.ಸಿ.ಆರ್ ಮಾಡಿಸಿ ನಂತರ ಕಳುಹಿಸಿಕೊಡಿ ಎಂದು ಹೇಳಿದ್ದೇವೆ. ಗಡಿಭಾಗದಲ್ಲಿ ಬಿಗಿ ಮಾಡಿದ್ದೇವೆ ಹೊರತು ಯಾರಿಗೂ ತೊಂದರೆಯಾಗಬಾರದು ಎನ್ನುವುದು ನಮ್ಮ ಉದ್ದೇಶವಾಗಿದೆ ಎಂದರು. ಪಕ್ಕದ ಜಿಲ್ಲೆಯಿಂದ ಬರುವವರು ಸರ್ಕಾರದ ಕ್ರಮಗಳನ್ನು ಅನುಸರಿಸಿದರೆ ಕೊರೊನ ಪ್ರಕರಣಗಳನ್ನು ತಡೆಗಟ್ಟಲು ಎರಡು ರಾಜ್ಯಗಳಿಗೂ ಸಹಕಾರಿಯಾಗಲಿದೆ. ಜಿಲ್ಲೆಯಲ್ಲಿ ಸದ್ಯಕ್ಕೆ 32 ಸಕ್ರೀಯ ಪ್ರಕರಣಗಳು ಮಾತ್ರ ಇದೆ. ಈ ಪೈಕಿ 11ಮಂದಿ ಆಸ್ಪತ್ರೆಯಲ್ಲಿ ಹಾಗೂ ಉಳಿದ 21 ಮಂದಿ ಹೋಮ್ ಐಸೋಲೇಶನ್ ನಲ್ಲಿದ್ದಾರೆ ಎಂದರು. ಕೋವಿಡ್ -19 ಪ್ರಾರಂಭದಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ 7.027 ಪಾಸಿಟಿವ್ ಪ್ರಕರಣಗಳು ಕಂಡುಬಂದಿದೆ ಎಂದು ತಿಳಿಸಿದರು. ಇದೆ ವೇಳೆ ಗುಂಡ್ಲುಪೇಟೆ ಶಾಸಕ ನಿರಂಜನ್ ಕುಮಾರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.


from India & World News in Kannada | VK Polls https://ift.tt/2Pye5Is

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...