ಕಾರ್‌ ಚಾಲಕನಿಗೆ ಪೊಲೀಸರು ವಿಧಿಸಿದ್ದ ₹500 ದಂಡ ವಾಪಸ್‌ ಕೊಡಿಸಿದ ಮಂಗಳೂರು ಎಸ್‌ಪಿ

ಮಂಗಳೂರು: ಖಾಸಗಿ ಕಾರಿನ ಚಾಲಕ ಸಮವಸ್ತ್ರ ಧರಿಸಿಲ್ಲ ಎಂಬ ನೆಪದಲ್ಲಿ 500 ರೂ. ದಂಡ ವಿಧಿಸಿದ್ದು, ಈ ವಿಷಯ ಪೊಲೀಸ್‌ ಅಧೀಕ್ಷಕರ ಸೂಚನೆ ಗಮನಕ್ಕೆ ಬರುತ್ತಿದ್ದಂತೆ ವಾಪಸ್‌ ನೀಡಲು ಸೂಚಿಸಿದ ಘಟನೆ ನಡೆದಿದೆ. ಸಾಮಾನ್ಯವಾಗಿ ಖಾಸಗಿ ವಾಹನ(ಬಿಳಿ ಬೋರ್ಡ್‌)ದ ಚಾಲಕರಿಗೆ ಸಮವಸ್ತ್ರ ಹಾಕುವ ನಿಯಮವಿಲ್ಲ. ಈ ನಿಯಮ ಯಲ್ಲೋ ಬೋರ್ಡ್‌ ನಂಬರ್‌ ಪ್ಲೇಟ್‌ನ ವಾಹನಗಳಿಗೆ ಮಾತ್ರ ಅನ್ವಯವಾಗುತ್ತದೆ. ಆದರೆ ಮಾ.23ರಂದು ರಾಮಲ್‌ಕಟ್ಟೆ ಎಂಬಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು, ಸಮವಸ್ತ್ರ ಧರಿಸದ ಕಾರಣಕ್ಕೆ ಪಾಣೆಮಂಗಳೂರು ಮೂಲದ ಕಾರು ಚಾಲಕರೊಬ್ಬರಿಗೆ 500 ರೂ.ಗಳ ದಂಡ ವಿಧಿಸಿದ್ದರು. ಎಸ್ಪಿಗೆ ಗಮನಕ್ಕೆ: ಮಾ. 25ರಂದು ಪೊಲೀಸ್‌ ನೀಡಿದ ದಂಡದ ರಶೀದಿಯನ್ನು ನೋಡಿದ ಕಾರಿನ ಚಾಲಕರ ಪುತ್ರ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಅಧೀಕ್ಷಕ ಬಿ.ಎಂ.ಲಕ್ಷ್ಮೀ ಪ್ರಸಾದ್‌ ಅವರ ಗಮನಕ್ಕೆ ತಂದಿದ್ದರು. ಈ ವೇಳೆ ಎಸ್ಪಿಯವರು ಸಮಸ್ಯೆಯನ್ನು ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ. ಅದರಂತೆ ಗುರುವಾರ ದಂಡ ಹಾಕಿದ ಪೊಲೀಸರ ಮೂಲಕ ಕಾರು ಚಾಲಕನಿಗೆ 500 ರೂ. ಹಿಂತಿರುಗಿಸಲಾಯಿತು. ಎಸ್ಪಿಯವರ ಕ್ರಮಕ್ಕೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ.


from India & World News in Kannada | VK Polls https://ift.tt/3lUhFJ7

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...