ಮೀಸಲಾತಿ ವಿಚಾರದಲ್ಲಿ ಬಿಜೆಪಿ ಜನತೆಯನ್ನು ವಂಚಿಸುತ್ತಿದೆ, ಕಾಂಗ್ರೆಸ್ ಆರೋಪ

ಬೆಂಗಳೂರು: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಜನತೆಯನ್ನು ವಂಚಿಸುತ್ತಿದೆ ಎಂದು ಆರೋಪ ಮಾಡಿದೆ. ರಾಜ್ಯದಲ್ಲಿ ಮೀಸಲಾತಿ ಬೇಡಿಕೆ ಮುಂದಿಟ್ಟುಕೊಂಡು ಪಂಚಮಸಾಲಿ ಸಮುದಾಯದ ಹೋರಾಟ ನಡೆಸುತ್ತಿದೆ. ಇದೀಗ ಇತರ ಸಮುದಾಯಗಳು ಹೋರಾಟದ ಎಚ್ಚರಿಕೆ ಕೊಟ್ಟಿವೆ. ಈ ಹಿನ್ನಲೆಯಲ್ಲಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ಈ ಕುರಿತಾಗಿ ಸಂಸದ ಶ್ರೀನಿವಾಸ್ ಪ್ರಸಾದ್, ಮೀಸಲಾತಿ ವಿಚಾರವಾಗಿ ಸಿಎಂ ಬಿಎಸ್‌ ಯಡಿಯೂರಪ್ಪ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದರು. ಸಂಸದರ ಹೇಳಿಕೆಯನ್ನು ಉಲ್ಲೇಖ ಮಾಡಿರುವ ಕಾಂಗ್ರೆಸ್ "ನೀನು ಸತ್ತಂಗೆ ಮಾಡು, ನಾನು ಅತ್ತಂಗೆ ಮಾಡ್ತೀನಿ" ಎನ್ನುವಂತೆ ಬಿಜೆಪಿ ನಾಯಕರು ಸಮುದಾಯಗಳ ದಿಕ್ಕು ತಪ್ಪಿಸುತ್ತಿದ್ದಾರೆ ಎನ್ನಲು ಶ್ರೀನಿವಾಸ್ ಪ್ರಸಾದ್ ಅವರ ಮಾತುಗಳು ಸಾಕ್ಷಿ ಕೊಡುತ್ತವೆ ಎಂದಿದೆ. ನಿಮಗೆ ಒಂದಾದರೂ ಒಳ್ಳೆಯ ಕೆಲಸ ಮಾಡುವ ಅಭ್ಯಾಸವೆ ಇಲ್ಲವಲ್ಲ ಏಕೆ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ಮೀಸಲಾತಿ ವಿಚಾರವಾಗಿ ಪಂಚಮಸಾಲಿ ಸಮುದಾಯ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹೋರಾಟ ನಡೆಸುತ್ತಿದೆ. ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ಮತ್ತೊಂದು ಕಡೆಯಲ್ಲಿ ಇತರ ಸಮುದಾಯಗಳು ಕೂಡಾ ಮೀಸಲಾತಿ ಹೋರಾಟಕ್ಕೆ ಮುಂದಾಗಿದೆ. ರಾಜ್ಯ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.


from India & World News in Kannada | VK Polls https://ift.tt/3b8995r

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...