ಅಶ್ಲೀಲ ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ಮೊಬೈಲ್ ವಶಕ್ಕೆ ಪಡೆದ ಎಸ್​ಐಟಿ

ಬೆಂಗಳೂರು: ಸಿ.ಡಿ ಪ್ರಕರಣದಲ್ಲಿ ಮಾಜಿ ಸಚಿವ ಅವರ ಮೊಬೈಲ್ ‌ಫೋನ್‌ ಅನ್ನು ಪರಿಶೀಲನೆಗಾಗಿ ವಿಶೇಷ ತನಿಖಾ ದಳ ವಶಕ್ಕೆ ಪಡೆದಿದೆ ಎಂದು ತಿಳಿದು ಬಂದಿದೆ. ನಾಪತ್ತೆಯಾಗಿರುವ ಯುವತಿ ಮತ್ತು ಮಾಜಿ ಸಚಿವರು ಫೋನ್‌ ಸಂಪರ್ಕದಲ್ಲಿದ್ದರು. ವಾಟ್ಸ್‌ಆ್ಯಪ್‌ ಮತ್ತು ವಿಡಿಯೊ ಕಾಲ್‌ ಮಾಡುತ್ತಿದ್ದರು ಎಂಬ ಅನುಮಾನ ಇದೆ. ರಮೇಶ್ ಜಾರಕಿಹೊಳಿ ತಮಗೂ ಈ ಸಿಡಿಗೂ ಸಂಬಂಧ ಇಲ್ಲ. ಇದು ಎಡಿಟ್ ಮಾಡಿದ ವಿಡಿಯೋ ಎಂದು ದೂರಿದ್ದರು. ಅಲ್ಲದೆ, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಬಳಿ ಮನವಿ ಮಾಡಿದ್ದರು. ಈ ಬಗ್ಗೆ ಮಾತನಾಡಿದ್ದ ಬಸವರಾಜ ಬೊಮ್ಮಾಯಿ, ‘ಸಚಿವ ರಮೇಶ್ ಜಾರಕಿಹೊಳಿ ಅವರ ವಿನಂತಿ ಮೇರೆಗೆ ತನಿಖೆಗೆ ಆದೇಶಿಸಲಾಗಿದೆ’ ಎಂದಿದ್ದರು.ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡ ಈಗ ತನಿಖೆಗೆ ನಡೆಸುತ್ತಿದೆ. ರಮೇಶ್‌ ಜಾರಕಿಹೊಳಿ ಸೆಕ್ಸ್‌ ಸಿಡಿ ಎಲ್ಲಿ ತಯಾರಾಗಿದೆ, ವೆಬ್ಸೈಟ್ಗಳಿಗೆ ಎಲ್ಲಿಂದ ಅಪ್ಲೋಡ್ ಆಯಿತು ಎಂಬ ಬಗ್ಗೆ ಈ ತನಿಖೆ ಬೆಳಕು ಚೆಲ್ಲಲಿದೆ. ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವರು ತಿಳಿಸಿದ್ದರು.ಈ ಹಿನ್ನೆಲೆಯಲ್ಲಿಪರಿಶೀಲನೆ ನಡೆಸಲು ಫೋನ್‌ ನೀಡುವಂತೆ ಕೋರಿತ್ತು. ಜಾರಕಿಹೊಳಿ ಅವರು ಒಪ್ಪಿದ ಕಾರಣ ಬುಧವಾರ ರಾತ್ರಿ ಮೊಬೈಲ್‌ ಫೋನ್‌ ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ಪರಿಶೀಲನೆಗಾಗಿ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗುತ್ತದೆ ಎಂದು ತಿಳಿದು ಬಂದಿದೆ.


from India & World News in Kannada | VK Polls https://ift.tt/3d2si8J

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...