ಮಂಗಳೂರಿನ ಸಿಎಎ ಪ್ರತಿಭಟನೆಯಲ್ಲಿ ಹೆಣಗಳು ಬಿದ್ದಾಗ ಮುಸ್ಲಿಮರ ನೆರವಿಗೆ ನಿಂತಿದ್ದು ಜೆಡಿಎಸ್‌: ಎಚ್‌ಡಿಕೆ

ಬೆಂಗಳೂರು: ಮಂಗಳೂರಿನಲ್ಲಿ ಸಿಎಎ ಪ್ರತಿಭಟನೆ ವೇಳೆ ಹೆಣಗಳು ಬಿದ್ದು, ಅಲ್ಪಸಂಖ್ಯಾತರು ಆತಂಕದಲ್ಲಿದ್ದಾಗ ಕಾಂಗ್ರೆಸ್‌ ನಾಯಕರು ಬಿಲ ಸೇರಿದ್ದರು. ಅಂದು ಮುಸ್ಲಿಮರ ಬೆಂಬಲಕ್ಕೆ ನಿಂತಿದ್ದು ಜೆಡಿಎಸ್‌ ಎಂದು ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದಾರೆ. ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ಇಂದು ಬಸವಕಲ್ಯಾಣದಲ್ಲಿ ನಾವು ಮುಸ್ಲಿಂ ಅಭ್ಯರ್ಥಿಯನ್ನು ಹಾಕುತ್ತಲೇ ಕಾಂಗ್ರೆಸ್‌ ತಾನು ಮುಸ್ಲಿಮರ ರಕ್ಷಕ ಎಂದು ಎದೆತಟ್ಟಿಕೊಂಡು ಮುಂದೆ ಬಂದಿದೆ. ನಮ್ಮ ರಾಜ್ಯ, ನಮ್ಮ ನೆಲ, ನಮ್ಮ ಪಕ್ಷ, ನಮ್ಮ ಅಭ್ಯರ್ಥಿ. ಇದರಲ್ಲಿ ಜೆಡಿಎಸ್‌ ಯಾರ ಅಪ್ಪಣೆಗೆ ಕಾಯಬೇಕು? ಯಾವ ದೊಣ್ಣೆ ನಾಯಕನ ಆಜ್ಞೆ ಆಗಬೇಕು ನಮಗೆ? ಜನರಿಗೆ ಬೇಕಾದ ಅಭ್ಯರ್ಥಿಗಳನ್ನು ನಾವು ಹಾಕುತ್ತೇವೆ. ಅದರಲ್ಲಿ ನಮಗೆ ಧರ್ಮ ನಗಣ್ಯ. ಪ್ರತಿಯೊಂದರಲ್ಲೂ ಹಿಂದೂ-ಮುಸ್ಲಿಂ ಎಂದು ಹುಡುಕುವವರಿಗೆ ಜನ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡಬೇಕು ಎಂದು ಹೇಳಿದ್ದಾರೆ. ಮುಸ್ಲಿಮರನ್ನು ಮತಗಳಾಗಿ ನೋಡುವುದು ಕಾಂಗ್ರೆಸ್‌ನ ಐತಿಹಾಸಿಕ ದುರಭ್ಯಾಸ ಎಂದಿರುವ ಎಚ್‌ಡಿಕೆ, ಅದಕ್ಕಾಗಿಯೇ ಮುಸ್ಲಿಮರನ್ನು ಕಾಂಗ್ರೆಸ್‌ ನಮ್ಮ ಮತ ಎನ್ನುತ್ತದೆ. ನಮ್ಮವರು ಅನ್ನುವುದಿಲ್ಲ. ಕಾಂಗ್ರೆಸ್‌ನ ಇಂಥ ತಪ್ಪುಗಳಿಂದಲೇ ಬಿಜೆಪಿ ಈ ಹಂತಕ್ಕೆ ಬೆಳೆದಿದೆ. ದೇಶದಲ್ಲಿ ಕೋಮು ಭಾವನೆಗಳು ಈ ಮಟ್ಟಕ್ಕೆ ಕೆರಳಿರುವುದರ ಹಿಂದೆ ಕಾಂಗ್ರೆಸ್‌ನ ಪ್ರಮಾದಗಳಿವೆ. ಬಸವಕಲ್ಯಾಣದಲ್ಲಿ ಜೆಡಿಎಸ್‌ ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದೆ ಎಂದು 'ಮಹಾನ್‌ನಾಯಕ'ರು ಹೇಳಿದ್ದಾರೆ. ಪ್ರತಿಯೊಂದಕ್ಕೂ ಒಳ ಒಪ್ಪಂದ, ಒಳಸಂಚು ಮಾಡಿದವರಿಗಷ್ಟೇ ಒಳ ಒಪ್ಪಂದದ ಕನವರಿಕೆ. ಆಪರೇಷನ್‌ ಕಮಲದಲ್ಲಿ, ಮೈತ್ರಿ ಸರ್ಕಾರ ಉರುಳಿದ್ದರಲ್ಲಿ ಅಂಥ ಒಳಒಪ್ಪಂದಗಳು ಈಗಾಗಲೇ ಬಯಲಾಗಿವೆ. ಜೆಡಿಎಸ್‌ಗೆ ಇಂಥ ದುರ್ಬುದ್ಧಿ ಇಲ್ಲ ಎಂದೂ ವ್ಯಂಗ್ಯವಾಡಿದ್ದಾರೆ. ಇನ್ನು ನಮ್ಮ ಆಯ್ಕೆ, ನಿರ್ಧಾರಗಳ ಬಗ್ಗೆ ಮಾತನಾಡುವುದನ್ನು ಕಾಂಗ್ರೆಸ್‌ನ ಮಹಾನ್‌ ನಾಯಕರು ನಿಲ್ಲಿಸಿದರೆ ಉತ್ತಮ ಎಂದಿರುವ ಕುಮಾರಸ್ವಾಮಿ, ಇಲ್ಲವಾದಲ್ಲಿ ಜಾತ್ಯತೀತವಾದಿ ಮುಖವಾಡ ಧರಿಸಿರುವ ಅವರ ಕೋಮುವಾದಿ ಮುಖವನ್ನು ಬಯಲು ಮಾಡಬೇಕಾಗುತ್ತದೆ. ಶತಮಾನಗಳಿಂದ ವೀರನಾಗಿ ಮಲಗಿದ್ದ ಟಿಪ್ಪು ಸುಲ್ತಾನನ್ನು ದೇಶದ್ರೋಹಿಯನ್ನಾಗಿ ಮಾಡಿದ ಮಹಾನ್‌ ನಾಯಕರು ತೆಪ್ಪಗಿದ್ದರೆ ಸರಿ ಎಂದು ಆಗ್ರಹಿಸಿದ್ದಾರೆ.


from India & World News in Kannada | VK Polls https://ift.tt/3w1pn8R

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...