ಸಿ.ಡಿ ಪ್ರಕರಣ: ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾದ ರಮೇಶ್ ಜಾರಕಿಹೊಳಿ!

ಬೆಂಗಳೂರು: ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ ಎದುರು ಮಾಜಿ ಸಚಿವ ಸೋಮವಾರ ಹಾಜರಾಗಿದ್ದಾರೆ. ಬೆಂಗಳೂರಿನ ಆಡುಗೋಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ಸೋಮವಾರ ಬೆಳಗ್ಗೆ 10 ಗಂಟೆಗೆ ರಮೇಶ್ ಜಾರಕಿಹೊಳಿ ತೆರಳಿ ವಿಚಾರಣೆಗೆ ಹಾಜರಾದರು. ರಮೇಶ್ ಜಾರಕಿಹೊಳಿ ವಿರುದ್ಧ ಸಂತ್ರಸ್ತೆ ಯುವತಿ ದೂರು ನೀಡಿದ ಹಿನ್ನೆಲೆಯಲ್ಲಿ ಎಫ್ಐಆರ್‌ ದಾಖಲಾಗಿತ್ತು. ಅತ್ಯಾಚಾರ, ವಂಚನೆ, ಸಾಕ್ಷಿ ನಾಶದ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು. ಹೀಗಿದ್ದರೂ ರಮೇಶ್ ಜಾರಕಿಹೊಳಿಯನ್ನು ಎಸ್‌ಐಟಿ ವಿಚಾರಣೆಗೆ ಒಳಪಡಿಸಿರಲಿಲ್ಲ. ಪೊಲೀಸರು ನಡೆ ಸಾಕಷ್ಟು ಟೀಕೆಗೆ ಕಾರಣವಾಗಿತ್ತು. ಈ ನಡುವೆ ಎಸ್‌ಐಟಿ ರಮೇಶ್ ಜಾರಕಿಹೊಳಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿತ್ತು. ಅದರಂತೆ ರಮೇಶ್ ಜಾರಕಿಹೊಳಿ ಸೋಮವಾರ ಎಸ್‌ಐಟಿ ಮುಂದೆ ಹಾಜರಾಗಿದ್ದಾರೆ. ಈಗಾಗಲೇ ವಿಚಾರಣೆ ಆರಂಭಗೊಂಡಿದ್ದು ಯುವತಿ ದೂರು ಆಧರಿಸಿ ಹಲವಾರು ಪ್ರಶ್ನೆಗಳನ್ನು ಎಸ್ಐಟಿಯಿಂದ ಎದುರಿಸುವ ಸಾಧ್ಯತೆ ಇದೆ. ಯುವತಿ ತನ್ನ ದೂರಿನಲ್ಲಿ ಕೆಲಸ ಕೊಡಿಸುವುದಾಗಿ ರಮೇಶ್ ಜಾರಕಿಹೊಳಿ ಭರವಸೆ ಕೊಟ್ಟು ಲೈಂಗಿಕವಾಗಿ ಬಳಕೆ ಮಾಡಿಕೊಂಡು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಯುವತಿಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.ಈ ನಡುವೆ ಯುವತಿಯ ಪೋಷಕರು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧನೂ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿ.ಡಿ ಪ್ರಕರಣ ಬೇರೆಯದ್ದೇ ತಿರುವು ಪಡೆದುಕೊಂಡಿದೆ.


from India & World News in Kannada | VK Polls https://ift.tt/3fhzoca

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...