ಗದಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರಥಮ ಘಟಿಕೋತ್ಸವ ಮತ್ತು ಸಪ್ತ ವಸಂತ ಮಹೋತ್ಸವ ಆಚರಣೆ

ಗದಗ: ವೈದ್ಯಕೀಯ ವಿಜ್ಞಾನಗಳ‌ ಸಂಸ್ಥೆಯಲ್ಲಿ ಹಾಗೂ ಪ್ರಥಮ ಸಂಭ್ರಮವು ಮಾರ್ಚ್ 21ರಂದು ನಡೆಯಿತು. ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರಥಮ ಘಟಿಕೋತ್ಸವ ಕಾರ್ಯಕ್ರಮವನ್ನು ಗದಗ ಉಸ್ತುವಾರಿ ಸಚಿವ ಸಿ ಸಿ ಪಾಟೀಲ್ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು. ಘಟಿಕೋತ್ಸವದಲ್ಲಿ 150 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು. ವೈದ್ಯ ಪದವಿ ಪಡೆದ ವಿದ್ಯಾರ್ಥಿಗಳು ಹಬ್ಬದ ಸಂಭ್ರಮವನ್ನು ಆಚರಿಸಿದರು. ಗದಗ ಜಿಮ್ಸ್ ವೈದ್ಯಕೀಯ ಕಾಲೇಜ್ ನಲ್ಲಿ ಒಟ್ಟು 122 ವಿದ್ಯಾರ್ಥಿಗಳ ಪೈಕಿ 121 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇಕಡಾ 99.17 ಫಲಿತಾಂಶ ದಾಖಲೆಯಾಗಿದೆ. ಇನ್ನು ಎಮ್ ಬಿಬಿಎಸ್ ನಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪದಕ ವಿತರಣೆ ಮಾಡಿ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಡಿಸಿ ಮಾತನಾಡಿದ ಸಚಿವ ಸಿ.ಸಿ ಪಾಟೀಲ್ ಅವರು, ವೈದ್ಯ ವೃತ್ತಿ ಪವಿತ್ರ ವೃತ್ತಿಯಾಗಿದ್ದು ವೈದ್ಯ ನಾರಾಯಣ ಭವೋ ಎಂಬ ಗಾದೆಗೆ ತಕ್ಕಂತೆ ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸುವಂತೆ ವೈದ್ಯ ಪದವಿ ಪಡೆದ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಇನ್ನು ಕೊರೊನಾ ಸಮಯದಲ್ಲಿ ವೈದ್ಯಕೀಯ ಕಲಿಕೆಯೊಂದಿಗೆ ವೈದ್ಯರಿಗೆ ಸಹಕಾರ ನೀಡುವ ಮೂಲಕ ಕೋವಿಡ್ ಮಹಾಮಾರಿಯನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ವೈದ್ಯಕೀಯ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿದೆ ಎಂದು ಸಣ್ಣ ಕೈಗಾರಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಿ.ಸಿ.ಪಾಟೀಲ ಅವರು ವಿದ್ಯಾರ್ಥಿಗಳ ಕಾರ್ಯವನ್ನು ಶ್ಲಾಘಿಸಿದರು. ಜಿಮ್ಸ್ ಆವರಣದ ಮಹಾತ್ಮಾ ಗಾಂಧೀಜಿ ಮೈದಾನದಲ್ಲಿ ನಡೆದ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಪ್ತ ವಸಂತ ಮಹೋತ್ಸವ, ಪ್ರಥಮ ಘಟಿಕೋತ್ಸವ, ಸರಕಾರಿ ಬಿಎಸ್‌ಸಿ ಕಾಲೇಜ್, 13 ಕೆಎಲ್ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಸ್ಥಾವರ, ಧ್ವನಿ ನಿಯಂತ್ರಿತ ಬೋಧನಾ ಕೊಠಡಿಗಳು, ನೂತನ ಬಸ್ ನಿಲ್ದಾಣಗಳ ಲೋಕಾರ್ಪಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಸಮಾರಂಭವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಣ್ಣ ಕೈಗಾರಿಕಾ ನಿಗಮದ ಅಧ್ಯಕ್ಷ ಕಳಕಪ್ಪ ಬಂಡಿ, ಶಾಸಕ ಎಚ್ ಕೆ ಪಾಟೀಲ್, ಎಂಎಲ್ಸಿ ಎಸ್ ವಿ ಸಂಕನೂರ, ಜಿಮ್ಸ್ ನಿರ್ದೇಶಕ ಡಾ ಪಿ ಎಸ್ ಭೂಸರೆಡ್ಡಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.


from India & World News in Kannada | VK Polls https://ift.tt/312yeJc

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...