ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು: ಕೋರ್ಟ್‌ ಮೊರೆ ಹೋಗಿದಕ್ಕೆ ಸ್ಪಷ್ಟನೆ ನೀಡಿದ ಸಚಿವ ಸುಧಾಕರ್‌

ಬೆಂಗಳೂರು: ಜಾರಕಿಹೊಳಿ ರಾಸಲೀಲೆ ಸಿಡಿ ಹೊರ ಬರುತ್ತಿದ್ದಂತೆ, ತಮ್ಮ ವಿರುದ್ಧ ಯಾವುದೇ ಸುದ್ದಿ ಪ್ರಸಾರ ಮಾಡದಂತೆ ವಲಸೆ ಬಂದ 6 ಜನ ಸಚಿವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಬಗ್ಗೆ ಬಿರುಸಿನ ಚರ್ಚೆ ನಡೆಯುತ್ತಿರುವ ಮಧ್ಯೆ ಈ ಬಗ್ಗೆ ಸ್ಪಷ್ಟನೆ ನೀಡಿರುವ , ಸತ್ಯ ಹೊಸಲು ದಾಟುವುದರೊಳಗೆ, ಸುಳ್ಳು ಊರೆಲ್ಲಾ ಸುತ್ತಾಡಿಕೊಂಡು ಬಂದಿರುತ್ತದೆ ಎಂದಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಸತ್ಯ ಹೊಸಲು ದಾಟುವುದರೊಳಗೆ, ಸುಳ್ಳು ಊರೆಲ್ಲಾ ಸುತ್ತಾಡಿಕೊಂಡು ಬಂದಿರುತ್ತದೆ ಎಂಬಂತೆ, ಜೀವಮಾನವಿಡೀ ಗಳಿಸಿರುವ ಒಳ್ಳೆಯ ಹೆಸರು, ಯಾರದೋ ಷಡ್ಯಂತ್ರದಿಂದ ಕ್ಷಣಮಾತ್ರದಲ್ಲಿ ನಶಿಸಿ ಹೋಗುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕೆಯಿಂದ ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದೇವಿ ಎಂದು ತಿಳಿಸಿದರು. ರಾಜ್ಯದಲ್ಲಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಜನಮನ್ನಣೆ ಗಳಿಸುತ್ತಿರುವ ಸಚಿವರ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ ತೇಜೋವಧೆ ಮಾಡುವ ರಾಜಕೀಯ ಷಡ್ಯಂತ್ರ ನಡೆಯುತ್ತಿರುವ ಗುಮಾನಿ ಇದೆ. ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು ಎಂಬ ಪರಿಸ್ಥಿತಿ ಇರುವುದು ಸುಳ್ಳಲ್ಲ ಎಂದರು. ಸಾರ್ವಜನಿಕ ಜೀವನದಲ್ಲಿರುವವರಿಗೆ ಈ ರೀತಿಯ ಸವಾಲುಗಳು ಸಾಮಾನ್ಯ. ಆದರೆ ನಮ್ಮ ವಿರುದ್ಧ ಷಡ್ಯಂತ್ರಗಳು ನಡೆದಾಗ ಇಂತಹ ದುಷ್ಟ ಶಕ್ತಿಗಳನ್ನು ಎದುರಿಸುವುದೂ ಅನಿವಾರ್ಯ. ನಮ್ಮ ಆತ್ಮಸಾಕ್ಷಿ ಸರಿ ಇರುವವರೆಗೂ, ಜನರ ಆಶೀರ್ವಾದ ಇರುವವರೆಗೂ ಯಾವ ಷಡ್ಯಂತ್ರವೂ ಯಶಸ್ವಿಯಾಗುವುದಿಲ್ಲ. ನಮ್ಮ ನ್ಯಾಯವ್ಯವಸ್ಥೆ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದು ತಿಳಿಸಿದರು.


from India & World News in Kannada | VK Polls https://ift.tt/3bilPH1

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...