ಸದನದಲ್ಲಿ ಸಿ.ಡಿ ಸಂಬಂಧ ಧರಣಿ ಮುಂದುವರಿಸಲು ಕಾಂಗ್ರೆಸ್‌ ನಿರ್ಧಾರ, ಇಂದಿನ ಪ್ಲ್ಯಾನ್‌ ಏನು?

ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿಯ ‌ ಸಿ.ಡಿ ವಿಚಾರವಾಗಿ ಕಾಂಗ್ರೆಸ್ ಸದನದಲ್ಲಿ ಬುಧವಾರ ಕೂಡಾ ಪ್ರತಿಭಟನೆ ನಡೆಸಲಿದೆ. ಯುವತಿಯ ವಿಡಿಯೋ ಆರೋಪದಂತೆ ರಮೇಶ್ ಜಾರಕಿಹೊಳಿ‌ ವಿರುದ್ದ ಅತ್ಯಾಚಾರ ಪ್ರಕರಣ ದಾಖಲು ಮಾಡಬೇಕು ಎಂಬುವುದು ಕಾಂಗ್ರೆಸ್ ಆಗ್ರಹವಾಗಿದೆ. ಮಂಗಳವಾರ ಸದನದಲ್ಲಿ ಸಿ.ಡಿ ಪ್ರದರ್ಶನ ಮಾಡಿದ ಕಾಂಗ್ರೆಸ್ ಸದಸ್ಯರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಅಲ್ಲದೆ ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಅಷ್ಟೇ ಅಲ್ಲದೆ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿರುವ ಆರು ಮಂದಿ‌ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಮಂಗಳವಾರ ಇದೀ ದಿನ ಸದನ ನಡೆಯಲು ಕಾಂಗ್ರೆಸ್ ಅವಕಾಶ ಕೊಟ್ಟಿಲ್ಲ. ಈ ಬಗ್ಗೆ ಸ್ವೀಕರ್ ಸದನದ ಹೊರಗೆ ಪ್ರತಿಭಟನೆ ನಡೆಸುವಂತೆ ಮನವಿ ಮಾಡಿದರೂ ಕಾಂಗ್ರೆಸ್ ಜಗ್ಗಿಲ್ಲ. ಅಹೋರಾತ್ರಿ ಪ್ರತಿಭಟನೆ ಇನ್ನು ಸಿ.ಡಿ ವಿಚಾರವಾಗಿ ಕಾಂಗ್ರೆಸ್ ಅಹೋರಾತ್ರಿ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದೆ. ಈ ಬಗ್ಗೆ ನಾಯಕರ ಹೇಳಿಕೆಯಲ್ಲಿ ಗೊಂದಲ ಇದ್ದರೂ ಬುಧವಾರ ಚರ್ಚೆ ನಡೆಸಿ ಅಧಿಕೃತ ನಿರ್ಧಾರ ಕೈಗೊಳ್ಳಲು ಮುಂದಾಗಿದೆ. ಉಪಚುನಾವಣೆ ಘೋಷಣೆ ಆಗಿರುವುದರಿಂದ ಸದನದ ಹೊರಗೂ ಈ ವಿಚಾರ ಮುಂದಿಟ್ಟುಕೊಂಡು ಹೋರಾಟ ನಡೆಸಲು ನಿರ್ಧಾರ ಮಾಡಿದೆ.


from India & World News in Kannada | VK Polls https://ift.tt/2OUbaKo

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...