ಚಿಕ್ಕಮಗಳೂರಿನಲ್ಲಿ ಅಪ್ಪನ ಮೇಲಿನ ದ್ವೇಷಕ್ಕೆ ಅಪ್ರಾಪ್ತೆ ಮೇಲೆ ಅತ್ಯಾಚಾರ!

: ಅಪ್ರಾಪ್ತ ಬಾಲಕಿಯ ತಂದೆಯ ಮೇಲಿನ ದ್ವೇಷದ ಹಿನ್ನೆಲೆಯಲ್ಲಿ ದುರುಳನೊಬ್ಬ ಬಾಲಕಿಯನ್ನು ಪುಸಲಾಯಿಸಿ ಹೋಮ್‌ ಸ್ಟೇಗೆ ಕರೆದೊಯ್ದು ಅತ್ಯಾಚಾರವೆಸಗಿದ ಘಟನೆ ನಡೆದಿದೆ. ಬಾಳೆಹೊನ್ನೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿ ಮಹೇಶ್‌ ವಿರುದ್ಧ ದೂರು ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಕುಡಿವ ನೀರಿನಲ್ಲಿ ಅಮಲು ಬರುವ ಪುಡಿಯನ್ನು ಬೆರೆಸಿ ಅತ್ಯಾಚಾರವೆಸಗಲಾಗಿದೆ ಎಂದು ಪೋಷಕರು ದೂರಿದ್ದು, ವೈದ್ಯಕೀಯ ಪರೀಕ್ಷೆಯಿಂದ ಇದು ಸ್ಪಷ್ಟವಾಗಬೇಕಿದೆ. ಆರೋಪಿ ಮಹೇಶ್‌ 7 ತಿಂಗಳ ಹಿಂದೆ ಬಾಲಕಿಯ ತಂದೆಯ ಬಳಿ ಹಿಟಾಚಿ ಡ್ರೈವರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ. ಕೆಲಸಕ್ಕೆ ಬರುವ ಸಂದರ್ಭ ಮಗಳ ಜತೆ ಮೊಬೈಲ್‌ನಲ್ಲಿ ಮಾತನಾಡುತ್ತಿರುವುದನ್ನು ಗಮನಿಸಿದ ಪೋಷಕರು ಆತನಿಗೆ ಎಚ್ಚರಿಕೆ ನೀಡಿ ಕೆಲಸದಿಂದ ತೆಗೆದು ಹಾಕಲಾಗಿತ್ತು. ಈ ಘಟನೆಯಿಂದ ಆಕ್ರೋಶಗೊಂಡಿದ್ದ ಮಹೇಶ್‌ ಫೆಬ್ರವರಿ 26ರಂದು ಬಾಲಕಿಯನ್ನು ಮೊಬೈಲ್‌ ಮೂಲಕ ಸಂಪರ್ಕಿಸಿ ಆಕೆಯ ಶಾಲೆಯ ಬಳಿ ಬಂದು ಕಳಸ ಸಮೀಪದ ಹೋಮ್‌ ಸ್ಟೇ ಒಂದಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಬಾಲಕಿ ರಾತ್ರಿ ತಡವಾಗಿ ಮನೆಗೆ ಬಂದಿದ್ದಲ್ಲದೆ ಎಂದಿನ ಲವಲವಿಕೆ ಇಲ್ಲದಿರುವುದನ್ನು ಗಮನಿಸಿ ಪೋಷಕರು ವಿಚಾರಿಸಿದಾಗ ನಡೆದ ಘಟನೆಯನ್ನು ಹೇಳಿದ್ದಾಳೆ. ಬಾಲಕಿಯ ತಂದೆ ತಕ್ಷಣ ಬಾಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


from India & World News in Kannada | VK Polls https://ift.tt/3c219SO

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...