ಬಜೆಟ್ ಅಧಿವೇಶನ: ಜಾರಕಿಹೊಳಿ ಹೆಸರಲ್ಲಿ ಜಾರುಬಂಡೆ ಆಡಲು ಸಜ್ಜಾದ ಸದನ?

ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಇಂದಿನಿಂದ(ಮಾ.04-ಗುರುವಾರ) ಆರಂಭಗೊಂಡಿದ್ದು ಸದನ ಕದನಕ್ಕೆ ಆಡಳಿತ ಹಾಗೂ ವಿರೋಧ ಪಕ್ಷಗಳು ಸಜ್ಜಾಗಿವೆ. ಈ ನಿಟ್ಟಿನಲ್ಲಿ ಆಡಳಿತ ಪಕ್ಷದ ಮೇಲೆ ಹಲವು ಬ್ರಹ್ಮಾಸ್ತ್ರಗಳನ್ನು ಪ್ರಯೋಗ ಮಾಡಲು ಅಂತಿಮ ಹಂತದ ಸಿದ್ಧತೆ ನಡೆಸುತ್ತಿದೆ. ಈ ವಿಚಾರವಾಗಿ ಚರ್ಚೆ ನಡೆಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆಯುತ್ತಿದೆ. ಸಚಿವ ರಮೇಶ್ ಜಾರಕಿಹೊಳಿ ಸಿ.ಡಿ ಪ್ರಕರಣ ಕಾಂಗ್ರೆಸ್ ಪಾಲಿಗೆ ಪ್ರಬಲ ಅಸ್ತ್ರವಾಗಿ ಸಿಕ್ಕಿತ್ತು. ಆದರೆ ಅಧಿವೇಶನ ಆರಂಭಕ್ಕೂ ಮೊದಲೇ ರಾಜೀನಾಮೆ ಪಡೆಯುವಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಯಶಸ್ವಿ ಆಗಿದ್ದಾರೆ. ಹೀಗಿದ್ದರೂ ಸಿ.ಡಿ ವಿಚಾರವನ್ನು ಸದನದಲ್ಲಿ ಪ್ರಸ್ತಾಪ ಮಾಡಲು ಕಾಂಗ್ರೆಸ್ ಮುಂದಾಗಿದೆ. ಅದರ ಜೊತೆಗೆ ಮೀಸಲಾತಿ ಬೇಡಿಕೆ ಚರ್ಚೆ, ಚಿಕ್ಕಬಳ್ಳಾಪುರದಲ್ಲಿ ನಡೆದ ಸ್ಫೋಟ ಪ್ರಕರಣ, ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಕಾಂಗ್ರೆಸ್ ಪಾಲಿಗೆ ಅಸ್ತ್ರಗಳಾಗಿದೆ. ಇವನ್ನೆಲ್ಲ ಮುಂದಿಟ್ಟುಕೊಂಡು ಆಡಳಿತ ಪಕ್ಷಕ್ಕೆ ಮುಜುಗರ ಉಂಟು ಮಾಡಲು ಕಾಂಗ್ರೆಸ್ ಮುಂದಾಗಿದೆ. ವಿಪಕ್ಷಗಳ ಬಾಣ ಎದುರಿಸಲು ಸಜ್ಜು ಅಧಿವೇಶನದಲ್ಲಿ ವಿರೋಧ ಪಕ್ಷಗಳ ಬಾಣ ಎದುರಿಸಲು ಬಿಜೆಪಿ ಸಜ್ಜಾಗಿದೆ. ಈಗಾಗಲೇ ಕ್ಯಾಬಿನೆಟ್ ಸಭೆ ನಡೆಸಿ ಈ ವಿಚಾರವಾಗಿ ಚರ್ಚೆ ನಡೆಸಲಾಗಿದೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆದುಕೊಂಡು ಮುಜುಗರದಿಂದ ತಪ್ಪಿಸಿಕೊಂಡಿದೆ. ಎಲ್ಲ ಸದಸ್ಯರು ಸದನಕ್ಕೆ ಕಡ್ಡಾಯ ಹಾಜರಾಗುವ ಮೂಲಕ ವಿರೋಧ ಪಕ್ಷಗಳ ಆರೋಪಕ್ಕೆ ಸೂಕ್ತವಾಗಿ ಉತ್ತರಿಸುವಂತೆ ಬಿಎಸ್ ವೈ ಸೂಚನೆ ನೀಡಿದ್ದಾರೆ. ಒಂದು ರಾಷ್ಟ್ರ ಒಂದು ಚುನಾವಣೆ ಚರ್ಚೆ ಇಂದಿನಿಂದ ಆರಂಭಗೊಂಡಿರುವ ಅಧಿವೇಶನದಲ್ಲಿ ಮೊದಲ ಎರಡು ದಿನಗಳ ಕಾಲ ಒಂದು ರಾಷ್ಟ್ರ ಒಂದು ಚುನಾವಣೆ ವಿಚಾರವಾಗಿ ಚರ್ಚೆ ನಡೆಯಲಿದೆ. ಈ ಕುರಿತಾಗಿ ಸದಸ್ಯರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ. ಎಲ್ಲರ ಅಭಿಪ್ರಾಯ ಕ್ರೋಡೀಕರಿಸಿ ಕೇಂದ್ರಕ್ಕೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಳಿಸಿಕೊಡಲಿದ್ದಾರೆ.‌ ಕೋವಿಡ್ ಮುನ್ನೆಚ್ಚರಿಕೆ ಈ ಬಾರಿಯ ಅಧಿವೇಶನಕ್ಕೂ ಕೋವಿಡ್ ಆತಂಕ ಇದೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗಿದೆ.ಸಾಮಾಜಿಕ ಅಂತರ ಕಡ್ಡಾಯ ಮಾಡಲಾಗಿದೆ. ಆದರೆ ಕೋವಿಡ್ ಟೆಸ್ಟ್ ಕಡ್ಡಾಯ ಇಲ್ಲ ಎಂದು ಸ್ಪೀಕರ್ ತಿಳಿಸಿದ್ದಾರೆ.


from India & World News in Kannada | VK Polls https://ift.tt/3rfawoF

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...