ರಮೇಶ್ ಜಾರಕಿಹೊಳಿ‌ ಸಿ.ಡಿ ಪ್ರಕರಣ: ನ್ಯಾಯಾಲಯದ ಮುಂದೆ ಹಾಜರಾಗ್ತಾರಾ ಯುವತಿ?

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಸಿ.ಡಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಿಡಿಯಲ್ಲಿ ಕಾಣಿಸಿಕೊಂಡ ಯುವತಿ ಇದುವರೆಗೂ ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡುವ ಮೂಲಕ ಆರೋಪಗಳ ಸುರಿಮಳೆಗೈದಿದ್ದು ಇದೀಗ ನೇರವಾಗಿ ನ್ಯಾಯಾಲಯದ ಮುಂದೆ ಹಾಜರಾಗಿ ಹೇಳಿಕೆ ಕೊಡುವ ಸಾಧ್ಯತೆ ಇದೆ. ರಮೇಶ್ ಜಾರಕಿಹೊಳಿ‌ ವಿರುದ್ಧ ಯುವತಿ ಈಗಾಗಲೇ ದೂರನ್ನು ನೀಡಿದ್ದಾರೆ. ದೂರಿನಲ್ಲಿ ಕೆಲಸ ಕೊಡಿಸುವದಾಗಿ ವಂಚನೆ ಮಾಡಿ ಲೈಂಗಿಕವಾಗಿ ಬಳಸಿಕೊಳ್ಳಲಾಗಿದೆ ಎಂದು ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅತ್ಯಾಚಾರ, ವಂಚನೆ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ನಡುವೆ ಯುವತಿಯ ಪೋಷಕರು ನೇರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದಾರೆ. ಗೋವಾಗೆ ಹೋಗಲು ತಮ್ಮ ಸಹೋದರಿಗೆ ಡಿಕೆಶಿ ಹಣ ನೀಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಯುವತಿ ಪೋಷಕರ ಹೇಳಿಕೆ ಬೆನ್ನಲ್ಲೇ ಪ್ರಕರಣ ಬೇರೆಯದ್ದೇ ತಿರುವು ಪಡೆದುಕೊಂಡಿದೆ. ಡಿಕೆಶಿ ವಿರುದ್ಧ ರಮೇಶ್ ಬೆಂಬಲಿಗರು ತಿರುಗಿ ಬಿದ್ದರೆ ಮತ್ತೊಂದು ಕಡೆಯಲ್ಲಿ ರಮೇಶ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಇದೀಗ ಯುವತಿಯ ನೇರ ಎಂಟ್ರಿ ಸಾಕಷ್ಟು ಮಹತ್ವ ಪಡೆದುಕೊಳ್ಳಲಿದೆ. ಆದರೆ ಎಸ್ ಐ ಟಿ ಮೇಲೆ ನಂಬಿಕೆ ಇಲ್ಲ ಎಂದು ಯುವತಿ ಒಂದು ಕಡೆಯಲ್ಲಿ ಹೇಳಿಕೆ ನೀಡಿದ್ದಾರೆ. ಈ ಕಾರಣಕ್ಕಾಗಿ ನೇರವಾಗಿ ನ್ಯಾಯಾಲಯದ ಮುಂದೆ ಹಾಜರಾಗಿ ತನ್ನ ಹೇಳಿಕೆ ನೀಡುವ ಸಾಧ್ಯತೆ ಇದೆ. ಈ ಬಗ್ಗೆ ಯುವತಿಯ ವಕೀಲರಾದ ಜಗದೀಶ್ ಸುಳಿವು ನೀಡಿದ್ದಾರೆ. ಗೌಪ್ಯ ಸ್ಥಳದಿಂದ ನೇರವಾಗಿ ನ್ಯಾಯಾಲಯದ ಮುಂದೆ ಹಾಜರಾಗಿ ಮಾಹಿತಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಒಂದು ವೇಳೆ ಹೀಗಾದ್ದಲ್ಲಿ ಇದು ಪ್ರಕರಣಕ್ಕೆ ಮತ್ತೊಂದು ತಿರುವು ನೀಡಲಿದೆ. ಒಟ್ಟಿನಲ್ಲಿ ಯುವತಿಯ ಮುಂದಿನ ನಡೆ ಏನು ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಯುವತಿ ಈಗಾಗಲೇ ಹೈ ಕೋರ್ಟ್ ನ್ಯಾಯಾಧೀಶರಿಗೆ ಒಂದು ಪತ್ರವನ್ನು ಬರೆದಿದ್ದಾರೆ ಎನ್ನಲಾಗಿದೆ. ಪತ್ರದಲ್ಲಿ ಹಲವು ವಿಚಾರಗಳನ್ನು ಉಲ್ಲೇಖಿಸಿದ್ದಾರೆ. ರಮೇಶ್ ಪ್ರಭಾವ ಬಳಸಿ ಸಾಕ್ಷಿ ನಾಶ ಮಾಡುತ್ತಿದ್ದಾರೆ ಹಾಗೂ ನನ್ನ ಜೀವಕ್ಕೆ ಅಪಾಯ ಇದೆ ಎಂದು ಹೇಳಿದದ್ದಾರೆ. ಎಸ್‌ಐಟಿ ತನಿಖೆಯ ಬಗ್ಗೆಯೂ ಯುವತಿ ಸಂಶಯ ವ್ಯಕ್ತಪಡಿಸಿದ್ದು ಪತ್ರದಲ್ಲಿ ಇವೆಲ್ಲವೂ ಉಲ್ಲೇಖ ಮಾಡಲಾಗಿದೆ. ಈ ನಿಟ್ಟಿನಲ್ಲಿ ಯುವತಿ ಮುಂದಿನ ಹೆಜ್ಜೆ ಕುತೂಹಲ ಕೆರಳಿಸಿದೆ.


from India & World News in Kannada | VK Polls https://ift.tt/3cwSLfG

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...