![](https://vijaykarnataka.com/photo/81342940/photo-81342940.jpg)
ಬೆಂಗಳೂರು: ವಿರೋಧ ಪಕ್ಷದ ನಾಯಕ ಹಾಗೂ ಅವರ ಆಪ್ತ ಸ್ನೇಹಿತ ಸಿ.ಎಂ ಇಬ್ರಾಹಿಂ ನಡುವಿನ ಮುಸಿಸು ಮಾಯವಾದಂತಿದೆ. ಅವರ ನಿವಾಸಕ್ಕೆ ತೆರಳಿ ಬಿರಿಯಾನಿ ಊಟ ಸವಿದ ಸಿದ್ದರಾಮಯ್ಯ ಸ್ನೇಹದ ಮಾತನ್ನಾಡಿದ್ದರು. ಇದೀಗ ಇದರ ಬೆನ್ನಲ್ಲೇ ಸಿಎಂ ಇಬ್ರಾಹಿಂ ಅವರು ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಶುಕ್ರವಾರ ಸಿಎಂ ಇಬ್ರಾಹಿಂ ಅವರು ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿ ಮಾತುಕತೆ ಮಾಡಿದರು. ಪಕ್ಷದಲ್ಲಿ ಸಿದ್ದರಾಮಯ್ಯ ಅವರ ನಡೆಯ ಬಗ್ಗೆ ಸಿಎಂ ಇಬ್ರಾಹಿಂ ಅಸಮಧಾನಗೊಂಡಿದ್ದರು. ಅವರು ಜೆಡಿಎಸ್‌ಗೆ ಸೇರ್ಪಡೆ ಆಗುತ್ತಾರೆ ಎಂದು ಹೇಳಲಾಗುತ್ತಿತ್ತು. ಇದಕ್ಕೆ ಪೂರಕ ಎಂಬಂತೆ ಅವರು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಸಿಎಂ ಇಬ್ರಾಹಿಂ ಹಾಗೂ ಸಿದ್ದರಾಮಯ್ಯ ಒಂದು ಕಾಲದ ಆಪ್ತ ಸ್ನೇಹಿತರಾಗಿದ್ದವರು. ಆದರೆ ಕಾಂಗ್ರೆಸ್‌ನಲ್ಲಿ ಜಮೀರ್ ಅಹ್ಮದ್ ಖಾನ್ ಸಿದ್ದರಾಮಯ್ಯ ಅವರಿಗೆ ಆಪ್ತರಾದ ಹಿನ್ನೆಲೆಯಲ್ಲಿ ಸಿಎಂ ಇಬ್ರಾಹಿಂ ದೂರ ಆದರು. ಸಮಾಜವಾದಿ ಸಿದ್ದಾಂತದ ಹಿನ್ನೆಲೆಯ ಇಬ್ಬರು ಸ್ನೇಹಿತರ ನಡುವೆ ಸಂಧಾನ ಮಾತುಕತೆ ಕೂಡಾ ವಿಫಲವಾಗಿತ್ತು. ಆದರೆ ಇದೀಗ ದಿಢೀರ್ ಆಗಿ ಕೆಲವೊಂದು ಬದಲಾವಣೆಗಳು ನಡೆಯುತ್ತಿವೆ. ಹಳೇ ಸ್ನೇಹಿತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಸದ್ಯದ ರಾಜಕೀಯ ಸನ್ನಿವೇಶ ಕಾಂಗ್ರೆಸ್‌ಗೆ ಪೂರಕವಾಗಿದ್ದು ಈ ನಿಟ್ಟಿನಲ್ಲಿ ಪಕ್ಷದಲ್ಲಿ ಸಿದ್ದರಾಮಯ್ಯ ಅಸಮಾಧಾನ ಶಮನ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಸಿಎಂ ಇಬ್ರಾಹಿಂ ಹಾಗೂ ಸಿದ್ದರಾಮಯ್ಯ ಭೇಟಿ ಕುತೂಹಲ ಕೆರಳಿಸಿದೆ.
from India & World News in Kannada | VK Polls https://ift.tt/3uUocHR