ಆರ್‌ಎಸ್‌ಎಸ್‌ನ‌ ಪ್ರಧಾನ ಕಾರ್ಯದರ್ಶಿಯಾಗಿ ಕನ್ನಡಿಗ ದತ್ತಾತ್ರೇಯ ಹೊಸಬಾಳೆ ಆಯ್ಕೆ

ಬೆಂಗಳೂರು: ಆರ್‌ಎಸ್ಎಸ್‌ನ ನೂತನ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆಯವರು ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಹೊರ ವಲಯದಲ್ಲಿರುವ ಚೆನ್ನೇನಹಳ್ಳಿ ಜನಸೇವಾ ವಿದ್ಯಾಕೇಂದ್ರದಲ್ಲಿ ನಡೆಯುತ್ತಿರುವ ಅಖಿಲ ಭಾರತೀಯ ಪ್ರತಿನಿಧಿ ಸಭಾ (ಎಬಿಪಿಎಸ್) ದಲ್ಲಿ ದತ್ತಾತ್ರೇಯ ಹೊಸಬಾಳೆಯವರ ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ)ಯಾಗಿ ಆಯ್ಕೆ ಮಾಡಲಾಯಿತು. ಇದು ಆರ್‌ಎಸ್‌ಎಸ್‌ನ ಎರಡನೇ ಅತ್ಯುನ್ನತ ಜವಾಬ್ದಾರಿ ಆಗಿದ್ದು ಹೆಚ್ಚಿನ ಜವಾಬ್ಧಾರಿ ಇದೀಗ ಕನ್ನಡಿಗ ಹೊಸಬಾಳೆ ಹೆಗಲಿಗೇರಿದೆ. ದತ್ತಾತ್ರೇಯ ಹೊಸಬಾಳೆಯವರು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಸಬಾಳೆಯವರು. ಕಾಲೇಜು ಶಿಕ್ಷಣದ ನಂತರ ಸಂಘದ ಪೂರ್ಣಾವಧಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.RSSನಲ್ಲಿ ಸರಸಂಘಚಾಲಕ್ ಹಾಗೂ ಸರಕಾರ್ಯವಾಹ ಇವೆರಡೂ ಅತ್ಯುನ್ನತ ಹುದ್ದೆ ಹಾಗೂ ಜವಾಬ್ದಾರಿಯುತವಾಗಿವೆ. ಡಾ. ಮೋಹನ್ ಭಾಗವತ್ RSSನ ಸರ ಸಂಘ ಚಾಲಕರಾಗಿದ್ದು, ಭೈಯಾಜಿ ಜೋಶಿ 2009ರಿಂದ ಸರಕಾರ್ಯವಾಹರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಈ ಜವಾಬ್ಧಾರಿ ಇವರಿಗೆ ಸಿಕ್ಕಿದೆ. ಈ ಹಿಂದೆ ಕರ್ನಾಟಕದಿಂದ ಹೋ.ವೇ.ಶೇಷಾದ್ರಿ ಅವರು ಸರಕಾರ್ಯವಾಹರಾಗಿ ಹಲವು ವರ್ಷ ಸೇವೆ ಸಲ್ಲಿಸಿದ್ದರು. ಈಗ ಮತ್ತೊಮ್ಮೆ ಕನ್ನಡಿಗ ದತ್ತಾತ್ರೇಯ ಹೊಸಬಾಳೆಯವರು ಇದೇ ಹುದ್ದೆಗೆ ನೇಮಕಗೊಂಡಿದ್ದಾರೆ.


from India & World News in Kannada | VK Polls https://ift.tt/3c1G8IY

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...