ವೈವಾಹಿಕ ಸಂಬಂಧವನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸಿ! ಬಿಜೆಪಿ ಶಾಸಕರಿಗೆ ಸಿದ್ದರಾಮಯ್ಯ ಸವಾಲು

ಬೆಂಗಳೂರು: ರಾಜ್ಯದ 225 ಮಂದಿ ಶಾಸಕರ ‘ಶೀಲ’ ಶಂಕೆ ಮಾಡಿ ಸಚಿವ ಡಾ.ಕೆ ಸುಧಾಕರ್‌ ನೀಡಿರುವ ವಿವಾದಾತ್ಮಕ ಹೇಳಿಕೆ ಕೋಲಾಹಲವನ್ನೇ ಸೃಷ್ಟಿಸಿದೆ. ಈ ನಡುವೆ ವಿರೋಧ ಪಕ್ಷದ ನಾಯಕ ಬಿಜೆಪಿ ಶಾಸಕರಿಗೆ ಹೊಸ ಸವಾಲೊಂದನ್ನು ಹಾಕಿದ್ದು, ಸುಧಾಕರ್‌ ಹೇಳಿಕೆ ಶಾಸಕರಿಗೂ ಅನ್ವಯವಾಗುವ ಕಾರಣ, ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಮತ್ತು ಸಿಎಂ ಬಿಎಸ್‌ ಯಡಿಯೂರಪ್ಪ ಸೇರಿದಂತೆ ಎಲ್ಲರೂ ತಕ್ಷಣ ತಮ್ಮ ವೈವಾಹಿಕ ಸಂಬಂಧವನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸಬೇಕು ಎಂದಿದ್ದಾರೆ. ಈ ಕುರಿತಾಗಿ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ಸಚಿವ ಸುಧಾಕರ್‌ ಹೇಳಿಕೆಯನ್ನು ಬಿಜೆಪಿ ಶಾಸಕರು ಒಪ್ಪಿಕೊಳ್ಳುವುದಾದರೆ, ರಾಜ್ಯ ಸರ್ಕಾರ ತಕ್ಷಣ ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 494 ಮತ್ತು 495ರ ಅನ್ವಯ ಕಾನೂನು ಕ್ರಮಕೈಗೊಳ್ಳಬೇಕು. 1955ರ ಹಿಂದೂ ವಿವಾಹ ಕಾಯ್ದೆಯಡಿ ಬಹುಪತ್ನಿತ್ವ ಕಾನೂನು ಪ್ರಕಾರ ಅಪರಾಧವಾಗಿದೆ ಎಂದಿದ್ದಾರೆ. ಸುಧಾಕರ್‌ ಹೇಳಿಕೆಯನ್ನು ಬಿಜೆಪಿ ಶಾಸಕರು ವಿರೋಧಿಸುವುದಾಗಿದ್ದರೆ ನಮ್ಮ ಪಕ್ಷದ ಶಾಸಕರೆಲ್ಲರೂ ಸ್ವಯಿಚ್ಚೆಯಿಂದ ತನಿಖೆಗೆ ಒಳಪಡಲು ನಿರ್ಧರಿಸಿದಂತೆ ಅವರೂ ಕೂಡಾ ಮುಖ್ಯಮಂತ್ರಿಗಳಿಗೆ ತಕ್ಷಣ ಪತ್ರ ಬರೆದು ತಮ್ಮ ಬಗ್ಗೆ ಕೂಡಾ ತನಿಖೆ ನಡೆಯಬೇಕೆಂದು ಮನವಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ. "ರಾಜ್ಯದ ಯಾವ ಶಾಸಕರೂ ಏಕಪತ್ನಿವೃತಸ್ಥರಲ್ಲ" ಎಂಬ ಸಚಿವ ಸುಧಾಕರ್‌ ಹೇಳಿಕೆ ಬಿಜೆಪಿ ಶಾಸಕರಿಗೂ ಅನ್ವಯವಾಗುವ ಕಾರಣ, ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಮತ್ತು ಬಿಎಸ್‌ ಯಡಿಯೂರಪ್ಪ ಸೇರಿದಂತೆ ಎಲ್ಲರೂ ತಕ್ಷಣ ತಮ್ಮ ವೈವಾಹಿಕ ಸಂಬಂಧವನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸಬೇಕು ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.


from India & World News in Kannada | VK Polls https://ift.tt/3f9uSMM

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...