ಕಬ್ಬನ್‌ ಪಾರ್ಕ್ ಆವರಣದಲ್ಲಿ ಹೊಸ ಕಟ್ಟಡ ನಿರ್ಮಾಣವಿಲ್ಲ: ಸರಕಾರಿ ನೌಕರರ ಸಂಘದ ಸ್ಪಷ್ಟನೆ

ಬೆಂಗಳೂರು: ಆವರಣದಲ್ಲಿರುವ ರಾಜ್ಯ ಸರಕಾರಿ ನೌಕರರ ಸಂಘದ ಕಟ್ಟಡದಲ್ಲಿ ಕೇವಲ ನವೀಕರಣ ಕಾಮಗಾರಿ ನಡೆಸಲಾಗುತ್ತಿದೆಯೇ ಹೊರತು ಯಾವುದೇ ಹೊಸ ನಿರ್ಮಾಣ ಕೆಲಸಗಳನ್ನು ಕೈಗೊಂಡಿಲ್ಲ ಎಂದು ಹೈಕೋರ್ಟ್‌ಗೆ ಸ್ಪಷ್ಟಪಡಿಸಲಾಗಿದೆ. ಕಬ್ಬನ್‌ಪಾರ್ಕ್ ನಡಿಗೆದಾರರ ಸಂಘದ ಅಧ್ಯಕ್ಷ ಎಸ್‌.ಉಮೇಶ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ಸಿಜೆ ಎ.ಎಸ್‌. ಓಕ್‌ ನೇತೃತ್ವದ ವಿಭಾಗೀಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಸಂಘದ ಪ್ರಧಾನ ಕಾರ್ಯದರ್ಶಿ ಗುರುವಾರ ಪ್ರಮಾಣ ಪತ್ರ ಸಲ್ಲಿಸಿ, ಸಂಘಕ್ಕೆ ಸೇರಿದ ಕಟ್ಟಡದಲ್ಲಿನ ಕೊಠಡಿ, ಕಾರಿಡಾರ್‌, ಎನ್‌ಜಿಒ ಹಾಲ್‌ ಮತ್ತು ಛಾವಣಿ ಭಾಗಗಳನ್ನು ಲೋಕೋಪಯೋಗಿ ಇಲಾಖೆ ಮೂಲಕ ನವೀಕರಿಸಲಾಗುತ್ತಿದೆ. ಅದು ಹೊರತುಪಡಿಸಿ ಯಾವುದೇ ಹೊಸ ನಿರ್ಮಾಣ ಕಾಮಗಾರಿ ಕೈಗೊಂಡಿಲ್ಲಎಂದು ಹೇಳಿದ್ದಾರೆ. ಅಲ್ಲದೆ, ಹೈಕೋರ್ಟ್‌ ಅನುಮತಿ ಪಡೆಯದೇ ಯಾವುದೇ ಹೊಸ ನಿರ್ಮಾಣ ಕಾಮಗಾರಿ ಮತ್ತು ಉದ್ದೇಶಿತ ಕ್ಯಾಂಟೀನ್‌ನ ಲೈಟ್‌ವೆಯಿಟ್‌ ರೂಮ್‌ ಸ್ಟ್ರಕ್ಚರ್‌ ನಿರ್ಮಾಣ ಮಾಡುವುದಿಲ್ಲಎಂದು ತಿಳಿಸಿದರು. ಆ ಪ್ರಮಾಣ ಪತ್ರ ದಾಖಲಿಸಿಕೊಂಡ ನ್ಯಾಯಪೀಠ, ನವೀಕರಣ ಕಾಮಗಾರಿ ಮುಂದುವರಿಸಲು ಅನುಮತಿ ನೀಡಿತು. ಜತೆಗೆ, ನವೀಕರಣ ಕಾಮಗಾರಿ ನಡೆಯುತ್ತಿರುವ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸರಕಾರಕ್ಕೆ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತು.


from India & World News in Kannada | VK Polls https://ift.tt/3qhG2B3

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...